Advertisement

Breaking News : ಸಿಗದ ಜಾಮೀನು : ಶಾರುಖ್ ಪುತ್ರನಿಗೆ ಜೈಲೇ ಗತಿ

07:05 PM Oct 07, 2021 | Team Udayavani |

ಮುಂಬೈ :  ಡ್ರಗ್ಸ್ ಸೇವನೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಮುಂಬೈನ ಕಿಲ್ಲಾ ಕೋರ್ಟ್ ಆದೇಶ ನೀಡಿದೆ.

Advertisement

ಕಳೆದ ಶನಿವಾರ ರಾತ್ರಿ ಮುಂಬೈನ ಕಡಲ ತೀರ ಪ್ರದೇಶದ ಐಷಾರಾಮಿ ‘ಕ್ರೂಸ್’ ಹಡಗಿನಲ್ಲಿ ನಡೆದಿದ್ದ ಡ್ರಗ್ಸ್‌ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಯನ್ ಖಾನ್ ಹಾಗೂ ಇತರ ಏಳು ಜನರನ್ನು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ (ಎನ್‌ಸಿಬಿ) ಅಧಿಕಾರಿಗಳು ಭಾನುವಾರ ಬಂಧಿಸಿ ಕೋರ್ಟ್‍ಗೆ ಹಾಜರು ಪಡಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ಅಕ್ಟೋಬರ್ 7 ರವರೆಗೆ ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ಇಂದು ಆ ಅವಧಿ ಮುಗಿದ ಹಿನ್ನೆಲೆ ಕೋರ್ಟ್ ಗೆ ಹಾಜರು ಪಡಿಸಲಾಯಿತು.

ಆರ್ಯನ್ ಖಾನ್ ಸೇರಿದಂತೆ ಮೂವರನ್ನು ಮುಂಬೈನ ಕಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಅಧಿಕಾರಿಗಳು, ಮತ್ತಷ್ಟು ವಿಚಾರಣೆಗಾಗಿ ಅಕ್ಟೋಬರ್ 11 ರವರೆಗೆ ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿತು.  ಆದರೆ, ಎನ್‍ಸಿಬಿಯ ಮನವಿಯನ್ನು ನಿರಾಕರಿಸಿದ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದರು. ಇದೇ ವೇಳೆ ಆರ್ಯನ್ ಪರ ವಕೀಲರು ಸಲ್ಲಿಸಿದ ಜಾಮೀನು ಅರ್ಜಿ(ಮಧ್ಯಂತರ ಮತ್ತು ಪೂರ್ಣ ಪ್ರಮಾಣ)ಗಳನ್ನುನ್ನು ಸೆಷನ್ಸ್ ಕೋರ್ಟ್‍ ಗೆ ವರ್ಗಾವಣೆ ಮಾಡಲಾಯಿತು.

 

Advertisement

 

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next