ಹಾಜರಾಗಿದ್ದಾರ ಅಥವಾ ಗೈರಾಗಿದ್ದಾರ ಎನ್ನುವ ಕುರಿತು ಅವರ ಪೋಷಕರಿಗೆ ಮಾಹಿತಿ ನೀಡಲು ಶಿಕ್ಷಣ ಇಲಾಖೆ ಯೋಜನೆ ರೂಪಿಸುತ್ತಿದೆ ಎಂದು ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.
Advertisement
ಕಾಲೇಜಿಗೆ ಹೋಗುವ ಹೆಸರಿನಲ್ಲಿ ವಿದ್ಯಾರ್ಥಿಗಳು ಬೇರೆಡೆ ಹೋಗಿದ್ದರೆ, ಅವರ ಪೋಷಕರಿಗೆ ಮಾಹಿತಿ ದೊರೆಯುವುದರಿಂದ ಅವರೂ ಮಕ್ಕಳ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಾರೆ. ಈಗಾಗಲೇ ಖಾಸಗಿ ಕಾಲೇಜುಗಳಲ್ಲಿ ಈ ರೀತಿಯ ವ್ಯವಸ್ಥೆ ಜಾರಿಯಲ್ಲಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆ ಕಾಲೇಜುಗಳಲ್ಲಿಯೂ ಜಾರಿಗೆ ತರಲು ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.