ಬೀದರ್ :ಸಂಪುಟ ಪುನರ್ ರಚನೆ ವೇಳೆ ನನ್ನನ್ನು ಮಂತ್ರಿ ಸ್ಥಾನದಿಂದ ಕೈಬಿಡಲಾಗುತ್ತಿದೆ ಎಂಬುದು ಕೇವಲ ಮಾಧ್ಯಮ ಸೃಷ್ಠಿ. ನನ್ನ ಸಚಿವ ಸ್ಥಾನ ಭದ್ರವಾಗಿದ್ದು, ಐ ಆಮ್ ಸೇಫ್ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
ಔರಾದ್ ತಾಲೂಕಿನ ವಡಗಾಂವ್ ಗ್ರಾಮದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಪಶು ಸಂಗೋಪನೆ ಸಚಿವನಾಗಿ ಉತ್ತಮ ಕೆಲಸ ಮಾಡಿದ್ದೇನೆ. ಕಳೆದ ಎರಡು ದಶಕದಿಂದ ಬಿಜೆಪಿ ಪಕ್ಷಕ್ಕಾಗಿ ದುಡಿದಿದ್ದೇನೆ, ಕ್ಷೇತ್ರದ ಜನರ ಆಶೀರ್ವಾದದಿಂದ ಮೂರು ಬಾರಿ ಶಾಸಕನಾಗಿ, ಎರಡನೇ ಸಲ ಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಹಾಗಾಗಿ ನನ್ನ ಸಚಿವ ಸ್ಥಾನಕ್ಕೆ ಯಾವುದೇ ತೊಂದರೆ ಇಲ್ಲ ಎಂದರು.
ಇದನ್ನೂ ಓದಿ : ಮಸೀದಿ ಕುರಿತು ತಾಂಬೂಲ ಪ್ರಶ್ನೆ; ಬಿಜೆಪಿ ಈ ರಾಜ್ಯವನ್ನು ಕೊಲ್ಲುತ್ತಿದೆ :ಡಿಕೆಶಿ
ವಿಧಾನ ಪರಿಷತ್ ಚುನಾವಣೆಯಲ್ಲಿ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಟಿಕೇಟ್ ನೀಡಿದೆ. ಆ ಮೂಲಕ ಪಕ್ಷಕ್ಕಾಗಿ ದುಡಿದವರಿಗೆ ನ್ಯಾಯ ಕಲ್ಪಿಸಿದೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಬಿಜೆಪಿಯಲ್ಲಿ ಕಡೆಗಣಿಸಲಾಗುತ್ತಿದೆ ಎಂಬುದು ಸುಳ್ಳು. ಬಿಎಸ್ ವೈ ಇಂದು ಮತ್ತೆ ನಾಳೆಯೂ ನಮಗೆಲ್ಲ ಮಾಸ್ ಲೀಡರ್ ಆಗಿದ್ದಾರೆ ಎಂದರು.