Advertisement

ಲಕ್ನೋ; ನಾಮಪತ್ರ ಸಲ್ಲಿಸಿದ ರಾಜ್ ನಾಥ್, ಪ್ರತಿಪಕ್ಷದ ಅಭ್ಯರ್ಥಿ ಯಾರು?

09:44 AM Apr 17, 2019 | Nagendra Trasi |

ಲಕ್ನೋ:ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಉತ್ತರಪ್ರದೇಶದ ಲಕ್ನೋ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಪ್ರತಿಪಕ್ಷದಿಂದ ಈವರೆಗೂ ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಸಿಲ್ಲ.

Advertisement

1991ರಿಂದ ಬಿಜೆಪಿಯ ಭದ್ರಕೋಟೆಯನ್ನಾಗಿ ಮಾಡಿದ್ದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ. 10ನೇ ಲೋಕಸಭಾ ಚುನಾವಣೆಯಲ್ಲಿ (1991) ವಾಜಪೇಯಿ ಅವರು ಲಕ್ನೋದಲ್ಲಿ ಸ್ಪರ್ಧಿಸುವ ಮೂಲಕ ಗೆಲುವು ಸಾಧಿಸಿದ್ದರು. ಬಳಿಕ 2004ರವರೆಗೂ ಲಕ್ನೋದಿಂದ ಸ್ಪರ್ಧಿಸಿ ಸತತವಾಗಿ ಜಯ ಸಾಧಿಸಿ 2009ರವರೆಗೂ ಸಂಸದರಾಗಿದ್ದರು. 2014ರ ಚುನಾವಣೆಯಲ್ಲಿ ಲಕ್ನೋದಿಂದ ರಾಜ್ ನಾಥ್ ಸಿಂಗ್ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ಈ ಬಾರಿ ಮಧ್ಯಪ್ರದೇಶದಲ್ಲಿ ಮೇ 6ರಂದು 2ನೇ ಹಂತದ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಎರಡು ದಿನ ಮಾತ್ರ ಬಾಕಿ ಉಳಿದಿದೆ. ರಾಜ್ ನಾಥ್ ಸಿಂಗ್ 2009ರಲ್ಲಿ ಉತ್ತರಪ್ರದೇಶದ ಘಾಜಿಯಾಬಾದ್ ಪಶ್ಚಿಮ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯ ಸಾಧಿಸಿದ್ದರು. ತದನಂತರ 2014ರಲ್ಲಿ ಕ್ಷೇತ್ರ ಬದಲಾಯಿಸಿ ಲಕ್ನೋ ಲೋಕಸಭಾ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದರು.

ನಾಮಪತ್ರ ಸಲ್ಲಿಕೆಗೂ ಮುನ್ನ ರಾಜ್ ನಾಥ್ ಸಿಂಗ್ ಅವರು ಭರ್ಜರಿ ರೋಡ್ ಶೋ ನಡೆಸಿ, ನಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next