Advertisement

ಬೌದಧರ್ಮ, ಸಿಖ್‌ ಧರ್ಮದಂತೆ ಬಸವ ಧರ್ಮ ಜಾಗತಿಕ ಧರ್ಮವಾಗಲಿ

07:30 AM Jul 26, 2017 | Harsha Rao |

ಬೆಂಗಳೂರು: ವೀರಶೈವ-ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವ ವಿಚಾರದಲ್ಲಿ ಸಚಿವ ಬಸವರಾಜ ರಾಯರಡ್ಡಿ ಪ್ರಸ್ತಾಪಕ್ಕೆ ಸಚಿವರಾದ ಎಂ.ಬಿ.ಪಾಟೀಲ್‌, ವಿನಯ ಕುಲಕರ್ಣಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್‌.ಆರ್‌.ಪಾಟೀಲ್‌ ಧ್ವನಿಗೂಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಎಂ.ಬಿ.ಪಾಟೀಲ್‌, ವೀರಶೈವ-ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ಕುರಿತು ನಮ್ಮ ಸಮಾಜದ ಮುಖಂಡರು ಹಾಗೂ ಸ್ವಾಮೀಜಿಗಳು ಈ ಸಂಬಂಧ
ನಿರ್ಧರಿಸಲಿದ್ದಾರೆ. ಇದರಲ್ಲಿ ಪೇಜಾವರ ಶ್ರೀಗಳು ಮಧ್ಯೆಪ್ರವೇಶಿಸುವ ಅವಶ್ಯಕತೆಯಿಲ್ಲ ಎಂದು ಹೇಳಿದರು.

Advertisement

ಬೌದಟಛಿ, ಸಿಖ್‌ ಧರ್ಮಗಳಂತೆ ಬಸವಧರ್ಮ ಜಾಗತಿಕ ಧರ್ಮವಾಗಬೇಕಿದೆ. ಆರ್‌ಎಸ್‌ಎಸ್‌ ಒತ್ತಡಕ್ಕೆ ಮಣಿದು ನಮ್ಮದೇ ಸಮುದಾಯದ ಯಡಿಯೂರಪ್ಪ ಅವರು ಏನೇನೋ ಮಾತನಾಡುತ್ತಿದ್ದಾರೆ. ಕೆಲವರು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಲಿಂಗಾಯತರಿಗೆ ಏನೂ ಮಾಡಿಲ್ಲ:
ಧಾರವಾಡದಲ್ಲಿ ಮಾತನಾಡಿದ ಸಚಿವ ವಿನಯ ಕುಲಕರ್ಣಿ, ರಾಜಕೀಯ ಲಾಭಕ್ಕಾಗಿ ಲಿಂಗಾಯತರು ಪ್ರತ್ಯೇಕ ಧರ್ಮ ಕೇಳುತ್ತಿಲ್ಲ. ಬದಲಿಗೆ ಈ ಸಮುದಾಯದಲ್ಲಿನ ಬಡವರಿಗೆ ಅನುಕೂಲಗಳು ಲಭಿಸಲಿ ಎಂದು ಕೇಳುತ್ತಿದ್ದಾರೆ. ಇದರಲ್ಲಿ ರಾಜಕೀಯ ಲಾಭದ ಆರೋಪ ಮೂರ್ಖತನದ್ದು. ಇದು ನಮ್ಮ ಹಕ್ಕು, ನಾವು ಕೇಳುತ್ತಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ. ಬಿಜೆಪಿಯವರು ಲಿಂಗಾಯತರಿಗೆ ಏನೂ ಮಾಡಿಲ್ಲ. ಆ ಪಕ್ಷ ಕಟ್ಟಿ ಬೆಳೆಸಿದ ಹಿರಿಯರಾದ
ಯಡಿಯೂರಪ್ಪ ಅವರನ್ನೂ ಬಿಡದೆ ರಕ್ತ ಹಿಂಡುತ್ತಿದ್ದಾರೆ. ಕಾಂಗ್ರೆಸ್‌ ನಿಜವಾಗಿಯೂ ಬಸವಣ್ಣನವರ ತತ್ವ ಸಿದಾಟಛಿಂತಕ್ಕೆ ಬದಟಛಿವಾಗಿರುವ ಪಕ್ಷ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಸಿ ಕಚೇರಿಯಲ್ಲಿ ಮಾತ್ರವಲ್ಲ ನಾಡಿನ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಹಾಕಿ ತಮ್ಮ ಅಭಿಮಾನ ತೋರಿದ್ದಾರೆ. ಇದೇ ಅಭಿಮಾನ
ಯಡಿಯೂರಪ್ಪ ಅವರಿಗೆ ಇದ್ದರೆ ಅವರು ಬಿಜೆಪಿ ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸಲಿ ಎಂದರು.

ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥರು ಲಿಂಗಾಯತ ಧರ್ಮದ ವಿಚಾರದಲ್ಲಿ ಚರ್ಚೆ ನಡೆಸುವುದು ಅನಗತ್ಯ. ಇದು ಲಿಂಗಾಯತರಿಗೆ ಸಂಬಂಧಿಸಿದ ವಿಚಾರ. ಇದರಲ್ಲಿ ಅವರ ಮಧ್ಯಪ್ರವೇಶದ ಅಗತ್ಯವಿಲ್ಲ ಎಂದು ಕಾಣುತ್ತದೆ
ಎಂದಿದ್ದಾರೆ. ಈ ಮಧ್ಯೆ, ವಿಜಯಪುರದಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್‌.ಆರ್‌ .ಪಾಟೀಲ್‌ ಕೂಡ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next