ವಿಜಯಪುರ: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜನಪ್ರೀಯತೆ ಹಾಗೂ ಮೈಸೂರು ಭಾಗದಲ್ಲಿ ವಿಜಯೇಂದ್ರ ಅವರ ವರ್ಚಸ್ಸು ಸಹಿಸದೇ ಕಾಂಗ್ರೆಸ್ ಹಾಗೂ ಆ ಪಕ್ಷದ ಮುಖಂಡರು ವಿಜಯೇಂದ್ರ ವಿರುದ್ಧ ಆಧಾರ ರಹಿತ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಶಾಸಕ, ಆಹಾರ ನಿಗಮದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ವಿಜಯೇಂದ್ರ ಬೆಂಬಲಕ್ಕೆ ನಿಂತಿದ್ದಾರೆ.
ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರಂಥ ಸಿಎಂ ಈ ಹಿಂದೆ ಯಾರೂ ಆಗಿಲ್ಲ, ಮುಂದೆ ಯಾರು ಆಗ್ತಾರೆ ಗೊತ್ತಿಲ್ಲ. ಹೀಗಾಗಿ ಇವರ ಜನಪ್ರಿಯತೆ ಸಹಿದಾಗಿರುವ
ಕಾಂಗ್ರೆಸ್ ನಾಯಕರು ಮಾಡಲು ಕೆಲಸವಿಲ್ಲದೇ ಆಧಾರ ರಹಿತ ಆರೋಪ ಮಾಡಿ, ಗೂಬೆ ಕೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ವಿಜಯೇಂದ್ರ ಪಕ್ಷ ಸಂಘಟನೆಯಲ್ಲಿ ದೊಡ್ಡ ಶಕ್ತಿಯಾಗಿ ಬೆಳೆದಿದ್ದಾರೆ. ಮೈಸೂರು ಭಾಗದಲ್ಲಿ ವಿಜಯೇಂದ್ರ ಜನಪ್ರೀಯ ನಾಯಕರಾಗಿ ಹೊರ ಹೊಮ್ಮುತ್ತಿದ್ದಾರೆ. ಇದನ್ನು ಸಹಿಸದೇ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ ಎಂದರು.
ರಾಜ್ಯದ ನಮ್ಮ ಸರಕಾರದಲ್ಲಿ ಹಣಕಾಸಿನ ಕೊರತೆಯಿಲ್ಲ. ಅನುದಾನ ಕಡಿಯದ ಕುರಿತು ಬಿಜೆಪಿ ಶಾಸಕ ಬಸನಗೌಡ ಯತ್ನಾಳ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಪ್ರವಾಹ ಮತ್ತು ತುರ್ತು ಕೆಲಸಗಳನ್ನು ಮೊದಲ ಆದ್ಯತೆ ಮೇಲೆ ಕೈಗೆತ್ತಿಕೊಳ್ಳಲು ಸೂಚನೆ ನೀಡಲಾಗಿದೆ.
ಆರೋಗ್ಯ, ಆಹಾರ ವಿಚಾರಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಆಹಾರಕ್ಕಾಗಿ ನಿತ್ಯ 80 ಕೋಟಿ ರೂ. ಬೇಕು. ಇದನ್ನು ಸರಕಾರ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದರು.