Advertisement

ಭೀಕರ ಅಪಘಾತ: ಕಾರಿನ ಮೇಲೆ ಮಗುಚಿ ಬಿದ್ದ ಮರಳು ತುಂಬಿದ ಲಾರಿ: 8 ಮಂದಿ ಸಾವು

09:46 AM Dec 02, 2020 | Mithun PG |

ಉತ್ತರಪ್ರದೇಶ: ಮರಳು ತುಂಬಿದ ಲಾರಿ, ಸ್ಕಾರ್ಪಿಯೋ ಕಾರೊಂದರ ಮೇಲೆ ಮಗುಚಿಬಿದ್ದ ಪರಿಣಾಮ 8 ಮಂದಿ ದಾರುಣವಾಗಿ ಸಾವನಪ್ಪಿದ ಘಟನೆ ಉತ್ತರಪ್ರದೇಶದ ಕೌಸಂಭಿ ಜಿಲ್ಲೆಯಲ್ಲಿ ನಡೆದಿದೆ.

Advertisement

ಸ್ಕಾರ್ಪಿಯೋ ವಾಹನದಲ್ಲಿ 10 ಮಂದಿ ಪ್ರಯಾಣಿಕರು ಮದುವೆ ಕಾರ್ಯಕ್ರಮಕ್ಕೆಂದು ತೆರಳಿ ಹಿಂದಿರುಗುತ್ತಿದ್ದರು ಎನ್ನಲಾಗಿದ್ದು, ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿದ್ದರು.  ಈ ವೇಳೆ ಮರಳು ತುಂಬಿದ್ದ ಟ್ರಕ್ ಕಾರಿನ ಮೇಲೆ ಮಗುಚಿ ಬಿದ್ದಿದೆ.

ಈ ಭೀಕರ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಮಹಿಳೆ ಸ್ಥಳೀಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  ಕೌಸಂಭಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಇದನ್ನೂ ಓದಿ: 28 ವರ್ಷಗಳಿಂದ ಮಗನನ್ನು ಕೋಣೆಯಲ್ಲಿ ಕೂಡಿಹಾಕಿದ ಮಹಿಳೆ: ಕಾರಣ ಭಯಾನಕ !

Advertisement

ಪ್ರಾಥಮಿಕ ತನಿಖೆಯ ಪ್ರಕಾರ,  ಟ್ರಕ್ ನ ಟಯರ್ ಸ್ಪೋಟಗೊಂಡು ಚಾಲಕನ ನಿಯಂತ್ರಣಕ್ಕೆ ಸಿಗದೆ ಮಗುಚಿಬಿದ್ದಿದೆ ಎಂದು ವರದಿಯಾಗಿದೆ.

ಘಟನೆಯ ಕುರಿತು ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಸಂತಾಪ ಸೂಚಿಸಿದ್ದು, ಕೂಡಲೇ ಪರಿಹಾರ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:  ಬಹು ದಿನಗಳ ಬಳಿಕ ಮತ್ತೆ ಬಣ್ಣ ಹಚ್ಚಲಿದ್ದಾರೆ ‘ಸುಪ್ರೀಂ ಹೀರೋ’ ಶಶಿಕುಮಾರ್

Advertisement

Udayavani is now on Telegram. Click here to join our channel and stay updated with the latest news.

Next