Advertisement
ಕುಂದಗೋಳ ತಹಶೀಲ್ದಾರ್ ಮೆಳವಂಕಿ ವರ್ಗಾವಣೆಕುಂದಗೋಳ: ಸ್ಥಳೀಯ ತಹಶೀಲ್ದಾರ್ ಬಸವರಾಜ ಮೆಳವಂಕಿ ಅವರನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಲಾಗಿದ್ದು, ಸಂಗಪ್ಪ ಬಾಡಗಿ ಅವರನ್ನು ತಹಶೀಲ್ದಾರ್ರನ್ನಾಗಿ ನೇಮಿಸಲಾಗಿದೆ. ಪಟ್ಟಣಕ್ಕೆ ಮಂಗಳವಾರ ಭೇಟಿ ನೀಡಿದ್ದ ಜಿಲ್ಲಾ ಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ಅವರನ್ನು ಈ ಕುರಿತು ಪ್ರಶ್ನಿಸಿದಾಗ, ಚುನಾವಣಾ ಆಯೋಗದ ಆದೇಶ ಮೇರೆಗೆ ವರ್ಗಾವಣೆ ಮಾಡಲಾಗಿದೆ ಎಂದರು. ಕುಂದಗೋಳ ತಹಶೀಲ್ದಾರ್ ವಿರುದ್ಧ ಪಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಿರೇಸೂರ ಹಾಗೂ ಜೆಡಿಎಸ್ ತಾಲೂಕಾಧ್ಯಕ್ಷ ರುದ್ರಪ್ಪ ಗಾಣಗೇರ ಅವರು ಪ್ರತ್ಯೇಕವಾಗಿ ರಾಜ್ಯ ಮುಖ್ಯ ಚುನಾವಣಾಯುಕ್ತರಿಗೆ ಏ.9ರಂದು ಮನವಿ ಸಲ್ಲಿಸಿದ್ದರು. ಮೆಳವಂಕಿ ಏಕಪಕ್ಷೀಯವಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಚುನಾವಣಾ ಸಂದರ್ಭದಲ್ಲಿ ಅಹಿತಕರ ಘಟನೆ ಆಗುವ ಸಾಧ್ಯತೆ ಇದ್ದು, ಕೂಡಲೇ ಅವರನ್ನು ವರ್ಗಾಯಿಸದಿದ್ದರೆ ಉಗ್ರ ಪ್ರತಿಭಟನೆ ಮಾಡುವುದಾಗಿ ಮನವಿಯಲ್ಲಿ ತಿಳಿಸಿದ್ದನ್ನು ಇಲ್ಲಿ ಉಲ್ಲೇಖೀಸಬಹುದು.