ಇಂಫಾಲ್: ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಣಿಪುರ ಪೊಲೀಸರು ಮತ್ತೊಬ್ಬನನ್ನು ಬಂಧಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿಯನ್ನು ಈಗಾಗಲೇ ಬಂಧಿಸಿದ್ದು ಇಂದು ಮತ್ತೊಬ್ಬನನ್ನು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ ಐದಕ್ಕೆ ಏರಿದೆ. ಘಟನೆಗೆ ಸಂಬಂಧಿಸಿ ಮಣಿಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು ಅಲ್ಲದೆ ಓರ್ವ ಆರೋಪಿ ಹೆರೋದಾಸ್ ಮನೆಗೆ ಶುಕ್ರವಾರ ಗ್ರಾಮಸ್ಥರೇ ಸೇರಿ ಬೆಂಕಿ ಹಚ್ಚಿದ್ದಾರೆ.
ಘಟನೆಗೆ ಸಂಬಂಧಿಸಿ ವಿವಿಧ ಜಿಲ್ಲೆಗಳಲ್ಲಿ 126 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಮತ್ತು ಗಲಭೆಗೆ ಸಂಬಂಧಿಸಿ ಈಗಾಗಲೇ 413 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದಿರುವ ಘಟನೆ ಖಂಡನೀಯ, ತಪ್ಪಿತಸ್ಥರಿಗೆ ಶಿಕ್ಷೆ ಖಂಡಿತಾ ಆಗುತ್ತೆ, ಯಾರು ಕೂಡ ಸುಳ್ಳು ಸುದ್ದಿಗಳನ್ನು ನಂಬಬೇಡಿ, ಶಾಂತಿಯಿಂದ ನೆಲೆಸಲು ಜನ ಸಹಕರಿಸಬೇಕು ಯಾವುದೇ ಅಹಿತಕರ ಘಟನೆ ನಡೆಸದಂತೆ ಜನರಲ್ಲಿ ಸರಕಾರ ಮನವಿ ಕೂಡ ಮಾಡಿದೆ.
ಇದನ್ನೂ ಓದಿ: Charlie Chaplin; ಹಾಸ್ಯಚಕ್ರವರ್ತಿ ಚಾರ್ಲಿ ಚಾಪ್ಲಿನ್ ಪುತ್ರಿ, ನಟಿ ಜೋಸೆಫಿನ್ ನಿಧನ