Advertisement

ಉ.ಪ್ರದೇಶದಲ್ಲಿ ನಾವು ಅಧಿಕಾರಕ್ಕೆ ಬಂದರೆ ಇಬ್ಬರು ಸಿಎಂ,ಮೂವರು ಡಿಸಿಎಂ: ಅಸಾದುದ್ದೀನ್ ಓವೈಸಿ

08:20 AM Jan 23, 2022 | Team Udayavani |

ಲಖನೌ: ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ಬಾಬು ಸಿಂಗ್ ಕುಶ್ವಾಹಾ ಮತ್ತು ಭಾರತ್ ಮುಕ್ತಿ ಮೋರ್ಚಾದೊಂದಿಗೆ ಉತ್ತರ ಪ್ರದೇಶದಲ್ಲಿ ತಮ್ಮ ಮೈತ್ರಿಯನ್ನು ಶನಿವಾರ ಘೋಷಿಸಿದ್ದಾರೆ.

Advertisement

ಉತ್ತರ ಪ್ರದೇಶದಲ್ಲಿ ತಮ್ಮ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಇಬ್ಬರು ಮುಖ್ಯಮಂತ್ರಿಗಳಾಗುತ್ತಾರೆ. ಒಬ್ಬರು ಒಬಿಸಿ ಸಮುದಾಯದವರು ಮತ್ತು ಇನ್ನೊಬ್ಬರು ದಲಿತ ಸಮುದಾಯದವರು ಸಿಎಂ ಆಗುತ್ತಾರೆ. ಮುಸ್ಲಿಂ ಸಮುದಾಯದವರು ಸೇರಿದಂತೆ 3 ಉಪಮುಖ್ಯಮಂತ್ರಿಗಳು ಇರುತ್ತಾರೆ ಎಂದು ಓವೈಸಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇದು ಬಲವಂತದಿಂದ ರಚನೆಯಾದ ಮೈತ್ರಿಯೇ ಎಂದು ಪ್ರಶ್ನಿಸಿದಾಗ ಉತ್ತರಿಸಿದ ಬಾಬು ಸಿಂಗ್ ಕುಶ್ವಾಹಾ, ಇದು ಬಲವಂತದ ಮೈತ್ರಿ ಅಲ್ಲ. ನಾವು ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕಾಗಿ ದೀರ್ಘಕಾಲ ಕೆಲಸ ಮಾಡಿದ್ದೇವೆ ಎಂದು ಅವರು ಹೇಳಿದರು.

ಇದನ್ನೂ ಓದಿ:ಈಗ ಆನ್‌ಲೈನ್‌ ಪ್ರಚಾರದ ಹವಾ; ಉ.ಪ್ರ, ಗೋವಾದಲ್ಲಿ ಡಿಜಿಟಲ್‌ ಪ್ರಚಾರ ಶುರು

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27, ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next