Advertisement

ಯೋಗಿ ಆದಿತ್ಯನಾಥ್ ಹೈಕೋರ್ಟ್ ಜಡ್ಜ್ ರೀತಿ ವರ್ತಿಸುತ್ತಿದ್ದಾರೆ: ಓವೈಸಿ ಟೀಕೆ

08:25 AM Jun 13, 2022 | Team Udayavani |

ಕಚ್: ಪ್ರಯಾಗ್‌ರಾಜ್ ಹಿಂಸಾಚಾರದ ಪ್ರಮುಖ ಆರೋಪಿಯ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಭಾನುವಾರ ವಾಗ್ದಾಳಿ ನಡೆಸಿದ್ದು, ‘ಯೋಗಿ ಆದಿತ್ಯನಾಥ್ ಅವರು ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಂತೆ ವರ್ತಿಸುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.

Advertisement

“ಯುಪಿ ಮುಖ್ಯಮಂತ್ರಿ ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿದ್ದಾರೆ. ಅವರು ಯಾರನ್ನಾದರೂ ಅಪರಾಧಿ ಎಂದು ಘೋಷಿಸುತ್ತಾರೆ ಮತ್ತು ಅವರ ಮನೆಗಳನ್ನು ಕೆಡವುತ್ತಾರೆಯೇ?” ಎಂದು ಗುಜರಾತ್‌ ನ ಕಚ್‌ನಲ್ಲಿ ರಾಲಿಯಲ್ಲಿ ಓವೈಸಿ ಕೇಳಿದರು.

ಪ್ರಯಾಗ್‌ ರಾಜ್‌ ನಲ್ಲಿ ಜೂನ್ 10 ರಂದು ನಡೆದ ಹಿಂಸಾಚಾರದ ಪ್ರಮುಖ ಆರೋಪಿ ಜಾವೇದ್ ಮೊಹಮ್ಮದ್ ಅಲಿಯಾಸ್ ಪಂಪ್ ನ ಮನೆಯನ್ನು ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರ (ಪಿಡಿಎ) ಭಾನುವಾರ ನೆಲಸಮಗೊಳಿಸಿದೆ.

ಇದನ್ನೂ ಓದಿ:ಚಿಕ್ಕಮಗಳೂರು : ಬಿಹಾರದ ಕಿಶನ್ ಗಂಜ್‍ನಲ್ಲಿ ಕಾಫಿನಾಡ ಯೋಧನ ಮೃತದೇಹ ಪತ್ತೆ !

ಆರೋಪಿ ಜಾವೇದ್ ಮೊಹಮ್ಮದ್ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಮುಖಂಡ ಮತ್ತು ಕಾರ್ಯಕರ್ತೆ ಅಫ್ರೀನ್ ಫಾತಿಮಾ ಅವರ ತಂದೆ. ಫಾತಿಮಾ ಕಳೆದ ವರ್ಷ ಪೌರತ್ವ ಕಾನೂನಿನ ವಿರುದ್ಧದ ಪ್ರತಿಭಟನೆಯ ಭಾಗವಾಗಿದ್ದವರು. ಪ್ರಯಾಗ್ ರಾಜ್ ಹಿಂಸಾಚಾರದಲ್ಲಿ ಆಕೆಯ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Advertisement

ಆರೋಪಿಯ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರಗಳು ಮತ್ತು ಆಕ್ಷೇಪಾರ್ಹ ಪೋಸ್ಟರ್‌ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧ್ವಂಸಕ್ಕೂ ಮುನ್ನ ಭಾನುವಾರ ಬೆಳಗ್ಗೆ ಅವರ ಮನೆಯಲ್ಲಿ ಶೋಧ ನಡೆಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next