Advertisement

ಆಶಾ ಕಾರ್ಯಕರ್ತೆಯರ ಧರಣಿ

03:51 PM Jul 25, 2020 | Suhan S |

ದಾವಣಗೆರೆ: ಮಾಸಿಕ 12 ಸಾವಿರ ರೂ. ಗೌರವಧನ ನಿಗದಿ, ಕೋವಿಡ್‌-19 ವಿರುದ್ಧದ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷಣಾ ಸಾಮಗ್ರಿ ವಿತರಣೆ, ಕೋವಿಡ್ ಸೋಂಕಿಗೆ ಒಳಗಾದಂತಹ ಕಾರ್ಯಕರ್ತೆಯರಿಗೆ ಸಂಪೂರ್ಣ ಚಿಕಿತ್ಸೆ, ಪರಿಹಾರಕ್ಕೆ ಒತ್ತಾಯಿಸಿ ಎಐಯುಟಿಯುಸಿ ನೇತೃತ್ವದಲ್ಲಿ ಆಶಾಕಾರ್ಯಕರ್ತೆಯರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ಶುಕ್ರವಾರ 15 ದಿನ ಪೂರೈಸಿತು.

Advertisement

ಮಾಸಿಕ 12 ಸಾವಿರ ರೂ. ಗೌರವಧನ ನಿಗದಿ, ಕೋವಿಡ್ ನಿಯಂತ್ರಣ ಕೆಲಸದಲ್ಲಿ ತೊಡಗಿರುವರಿಗೆ ಅತ್ಯಗತ್ಯ ಸುರಕ್ಷಾ ಪರಿಕರ ನೀಡುವುದು ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ  ಎಲ್ಲಾ ಕೆಲಸ ಸ್ಥಗಿತಗೊಳಿಸಿ ಕಳೆದ 14 ದಿನಗಳಿಂದ ವಿವಿಧ ಹಂತದ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಜೂ. 30 ರಂದು ಮತ್ತು ಕಳೆದ 15 ದಿನಗಳಿಂದ ಜಿಲ್ಲಾ, ತಾಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳು ಮತ್ತು ತಹಸೀಲ್ದಾರರುಗಳಿಗೆ ಮತ್ತು ರಾಜ್ಯದ ಹಲವಾರು ಸಚಿವರಿಗೆ ಮತ್ತು ಶಾಸಕರಿಗೆ ಖುದ್ದಾಗಿ ಆಶಾ ಕಾರ್ಯಕರ್ತೆಯರು ಅವರರವರ ಕ್ಷೇತ್ರಗಳಲ್ಲಿ ಮನವಿ ಸಲ್ಲಿಸಿದ್ದಾರೆ. ಆದರೂ ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುತ್ತಿಲ್ಲ ಎಂದು ದೂರಿದರು.

ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಕಳೆದ 4ದಿನಗಳ ಹಿಂದೆ ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್‌ ರವರು ಚರ್ಚೆ ನಡೆಯುತ್ತಿದ್ದು,2-3 ದಿನಗಳಲ್ಲಿ ಸರ್ಕಾರದ ಕ್ರಮದ ಬಗ್ಗೆ ತಿಳಿಸುವುದಾಗಿ ಮಾಧ್ಯಮದಲ್ಲಿ ತಿಳಿಸಿರುತ್ತಾರೆ. ನಂತರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಜು. 29 ರಂದು ರಾಜ್ಯ ವ್ಯಾಪಿಯಾಗಿ ಜಿಲ್ಲಾ ಮಟ್ಟದ ಬೃಹತ್‌ ಹೋರಾಟ ಹಮ್ಮಿಕೊಳ್ಳುವುದರ ಮೂಲಕ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next