Advertisement
ಜ. 25ರಂದು ಸಂಜೆ 3.30ಕ್ಕೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಫಲಾನುಭವಿಗಳ ಪ್ರಯಾಣದ ವ್ಯವಸ್ಥೆಯನ್ನೂ ಸಂಸ್ಥೆಯಿಂದಲೇ ಕಲ್ಪಿಸಲಾಗುವುದು. ಚಲನಚಿತ್ರ ನಟ, ನಿರ್ದೇಶಕ ರಮೇಶ್ ಅರವಿಂದ್, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಎಂಆರ್‌ಜಿ ಗ್ರೂಪ್‌ನ ಚೇರ್ಮನ್ ಕೆ. ಪ್ರಕಾಶ್ ಶೆಟ್ಟಿ, ಆಡಳಿತ ನಿರ್ದೇಶಕ ಗೌರವ್ ಪಿ. ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.
ಫಲಾನುಭವಿಗಳ ಆಯ್ಕೆಗೆ ಸಂಬಂಧಿಸಿ ಮಾರ್ಗದರ್ಶಿ ಸೂತ್ರ (ಎಸ್‌ಒಪಿ) ಅನುಸರಿಸಿದ್ದೇವೆ. ಅರ್ಹರು ವಂಚಿತರಾಗ ಬಾರದು ಎಂಬ ಕಾರಣಕ್ಕೆ ಸ್ಥಳೀಯ ಸಂಘ-ಸಂಸ್ಥೆಗಳನ್ನು ಬಳಸಿಕೊಂಡು ಅವರ ಆರ್ಥಿಕ ಸ್ಥಿತಿಗತಿ ಮತ್ತು ಅವರು
ಎದುರಿಸುತ್ತಿರುವ ಪರಿಸ್ಥಿತಿಯ ಪ್ರತ್ಯಕ್ಷ ಮಾಹಿತಿ ಪಡೆದುಕೊಳ್ಳಲಾಗಿದೆ. ಫಲಾನುಭವಿಗಳನ್ನು ಕರೆದುಕೊಂಡು ಬರುವ ಹೊಣೆಗಾರಿಕೆಯನ್ನು ಆಯಾ ಪ್ರದೇಶದ ಸಂಘ-ಸಂಸ್ಥೆಗಳಿಗೆ ನೀಡಲಾಗಿದೆ. ಡಿ. 25ರ ಸಮಾರಂಭದಲ್ಲಿ 25 ಕೌಂಟರ್ ತೆರೆಯಲಾಗುತ್ತದೆ. ಅಲ್ಲಿ ಫಲಾನುಭವಿಗಳು ತಮ್ಮ ಹೆಸರು ಹೇಳಿ ಮತ್ತು ಈಗಾಗಲೇ ವಿತರಣೆ ಮಾಡಿ ರುವ ಟೋಕನ್‌ಗಳನ್ನು ತೋರಿಸಿ ಚೆಕ್ ಪಡೆಯಬಹುದು ಎಂದು ವಿವರಿಸಿದರು. ವೈಯಕ್ತಿಕವಾಗಿ ಕನಿಷ್ಠ 10 ಸಾವಿರ ರೂ.ಗಳಿಂದ ಗರಿಷ್ಠ 1 ಲಕ್ಷ ರೂ., ಸಂಘ-ಸಂಸ್ಥೆಗಳಿಗೆ ಕನಿಷ್ಠ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ. ವಿತರಿಸಲಾಗುತ್ತಿದೆ. ಮಾನಸಿಕ, ಅಂಗವೈಕಲ್ಯ, ಕ್ಯಾನ್ಸರ್ ನಂತಹ ರೋಗಗಳಿಂದ ಬಳಲುತ್ತಿರುವ ರೋಗಿಗಳಿಗೆ ಆದ್ಯತೆ ಕೊಟ್ಟಿದ್ದೇವೆ. ಪ್ರತಿಭಾವಂತ ಬಡ ವಿದ್ಯಾರ್ಥಿಗಳನ್ನು ವಿದ್ಯಾರ್ಥಿವೇತನಕ್ಕೆ ಆಯ್ಕೆ ಮಾಡಿದ್ದೇವೆ. ಕ್ರೀಡಾಳುಗಳು, ರಾಷ್ಟ್ರ ಮತ್ತು ರಾಜ್ಯಕ್ಕೆ ಕೀರ್ತಿ ತಂದ ಸಾಧಕರನ್ನು ಪುರಸ್ಕಾರಕ್ಕಾಗಿ ಆಯ್ಕೆ ಮಾಡಲಾಗಿದೆ ಎಂದರು.
Related Articles
Advertisement
ಬಂಟ್ವಾಳದ ಶಾಲೆಯೊಂದಕ್ಕೆ ಕಂಪ್ಯೂಟರ್, ಕಾಪು ಕೈಪುಂಜಾಲಿನಲ್ಲಿ ಉಡುಪಿ ಶ್ರೀ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅಧ್ಯಕ್ಷರಾಗಿರುವ ವಿದ್ಯಾ ಸಾಗರ ಎಜುಕೇಶನ್ ಟ್ರಸ್ಟ್ ಶಾಲೆಯಲ್ಲಿ ಶೌಚಾಲಯ ನಿರ್ಮಾಣಕ್ಕೆ ನೆರವು ವಿತರಿಸಲಾಗುವುದು ಎಂದರು.
ಕ್ರೀಡಾ ಪ್ರೋತ್ಸಾಹಅಮೆರಿಕದಲ್ಲಿ ನಡೆದ ವಿಶ್ವ ಜೂನಿಯರ್ ಚಾಂಪಿಯನ್ ಶಿಪ್‌ನಲ್ಲಿ ಕಂಚಿನ ಪದಕ ಪಡೆದ ನಮ್ಮ ಜಿಲ್ಲೆಯ ಕ್ರೀಡಾಳು ಆಯುಷ್ ಶೆಟ್ಟಿ, ವಿಶ್ವ ಚಾಂಪಿಯನ್ ಶಿಪ್‌ನಲ್ಲಿ ಭಾರತದ 10ನೇ ಶಟ್ಲರ್ ಮತ್ತು ವಿಶ್ವ ಚಾಂಪಿಯನ್ ಶಿಪ್‌ನಲ್ಲಿ ಪದಕ ಪಡೆದ ಕರ್ನಾಟಕ ಮೊದಲನೇ ಶಟ್ಲರ್ ಅರ್ಜುನ್ ಶೆಟ್ಟಿ ಅವರಿಗೆ ನೆರವು ನೀಡಲಾಗುತ್ತಿದೆ. ಪಿಯುಸಿಯಲ್ಲಿ 600ಕ್ಕೆ 600 ಅಂಕ ಗಳಿಸಿದ ಅನನ್ಯಾ ಮತ್ತು ಎಸೆಸೆಲ್ಸಿಯಲ್ಲಿ 625 ಅಂಕ ಗಳಿಸಿದ ವೀಕ್ಷಿತಾ ಅವರನ್ನು ಸಮ್ಮಾನಿಸಿ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದು ಪ್ರಕಾಶ್ ವಿವರಿಸಿದರು.