Advertisement
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಮತ್ತು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಜಮಾವಣೆಗೊಂಡ ಕಾರ್ಯಕರ್ತೆಯರು, ರಾಜ್ಯ ಸರ್ಕಾರವೊಂದೇ ಆರು ಸಾವಿರ ರೂ. ಗೌರವಧನ ನೀಡಬೇಕು. ಅಲ್ಲಿಯವರೆಗೂ ಧರಣಿಯಿಂದ ಹಿಂದೆಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
Related Articles
ಆದರೆ, ಇದಕ್ಕೆ ಒಪ್ಪದ ಕಾರ್ಯಕರ್ತೆಯರು, “ಜನಪ್ರತಿನಿಧಿಗಳ ಭತ್ಯೆ-ಗೌರವಧನ ಹೆಚ್ಚಿಸಲು ಸರ್ಕಾರಕ್ಕೆ ಹಣಕಾಸಿನ ಕೊರತೆ ಇಲ್ಲ. ನಿತ್ಯ ಬೀದಿ-ಬೀದಿ ಅಲೆದು ಜನರಿಗೆ ಆರೋಗ್ಯ ಸೇವೆಗಳನ್ನು ನೀಡುವ ನಮಗೆ ಆರು ಸಾವಿರ ಗೌರವಧನ ನೀಡಲು ಚೌಕಾಸಿ ಮಾಡುತ್ತಿದೆ. ಅಷ್ಟಕ್ಕೂ ಈಗಾಗಲೇ ತೆಲಂಗಾಣ, ಕೇರಳದಲ್ಲಿ 6ರಿಂದ 7 ಸಾವಿರ ರೂ. ಗೌರವಧನ ನೀಡಲಾಗುತ್ತಿದೆ. ಅದೇ ಮಾದರಿಯಲ್ಲಿ ತಮಗೂ ನೀಡಬೇಕು’ ಎಂದು ಆಗ್ರಹಿಸಿದರು.
Advertisement
ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ಮಾತನಾಡಿ, ಆಶಾ ಕಾರ್ಯಕರ್ತೆಯರಿಗೆ ನೀಡುವ ಅನುದಾನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲು ಇದೆ. ನಾವು ಮಾಡುವ ಕೆಲಸಗಳಿಗೆ ಅನುಗುಣವಾಗಿ ಕೇಂದ್ರ ಅನುದಾನ ನೀಡಿದರೆ, ಅಷ್ಟೇ ಪ್ರಮಾಣದ ಅನುದಾನವನ್ನು ರಾಜ್ಯ ಸರ್ಕಾರ ಮ್ಯಾಚಿಂಗ್ ಗ್ರ್ಯಾಂಟ್ ರೂಪದಲ್ಲಿ ನೀಡಬೇಕು. ಜತೆಗೆ ವಿಶೇಷ ಗೌರವಧನ ಕೊಡಬೇಕು.
ಆದರೆ, ರಾಜ್ಯ ಸರ್ಕಾರವು ಎಲ್ಲವೂ ಸೇರಿ 5 ಸಾವಿರ ರೂ. ನೀಡುವುದಾಗಿ ಹೇಳುತ್ತಿದೆ. ಹಾಗಾಗಿ, ಇದು ಒಪ್ಪಿತವಲ್ಲ. ಮುಷ್ಕರ ಅನಿರ್ದಿಷ್ಟಾವಧಿಗೆ ಮುಂದುವರಿಯಲಿದೆ ಎಂದು ಹೇಳಿದರು. ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಮಾತನಾಡಿ, “ಸರ್ಕಾರ ಐದು ಸಾವಿರ ರೂ. ನೀಡಲು ಮುಂದಾಗಿರುವುದು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಅದೇನೇ ಇರಲಿ, ಈ ಬಗ್ಗೆ ಕಾರ್ಯಕರ್ತೆಯರೊಂದಿಗೆ ಚರ್ಚಿಸಿ, ನಂತರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.
67 ಕಾರ್ಯಕರ್ತೆಯರಿಗೆ 10 ಸಾವಿರ ರೂ.!ಮುಷ್ಕರದಲ್ಲಿ ಲೇಖಕಿ ರೂಪಾ ಹಾಸನ್ ಮಾತನಾಡಿ, ಸುಮಾರು 37 ಸಾವಿರ ಆಶಾ ಕಾರ್ಯಕರ್ತೆಯರಿದ್ದಾರೆ. ಈ ಪೈಕಿ 67 ಜನ ಮಾತ್ರ ಮಾಸಿಕ 10 ಸಾವಿರ ಪ್ರೋತ್ಸಾಹಧನ ಪಡೆದಿದ್ದಾರೆ. ಇದು ಆಶಾ ಸಾಫ್ಟ್ವೇರ್‌ನ ಕೊಡುಗೆ. ಉಳಿದವರಿಗೆ ಗರಿಷ್ಠ ಕೇವಲ 2 ಸಾವಿರ ರೂ. ಬಂದಿದೆ. ಅನೇಕರಿಗೆ ಇದು ಕೂಡ ಬಂದಿಲ್ಲ. ಇನ್ನು ಮ್ಯಾಚಿಂಗ್ ಗ್ರ್ಯಾಂಟ್ ಅಂತೂ ದೂರದ ಮಾತಾಗಿದೆ. ಹೀಗಿರುವಾಗ, ಬದುಕು ಸಾಗಿಸುವುದು ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು. “ಸರ್ಕಾರ ಒಟ್ಟಾರೆ 32 ಚಟುವಟಿಕೆಗಳನ್ನು ನೂತನ ಸಾಫ್ಟ್ವೇರ್‌ನಲ್ಲಿ ಅಳವಡಿಸಿದೆ. ಇದರಲ್ಲಿ 8ರಿಂದ 10 ಚಟುವಟಿಕೆಗಳು ಮಾತ್ರ ನಿರಂತರವಾಗಿರುತ್ತವೆ. ಇವುಗಳನ್ನು ಆಯಾ ತಿಂಗಳು ಮಾಡಿಮುಗಿಸಿದರೂ ತಾಂತ್ರಿಕ ಕಾರಣಗಳಿಂದ ಪ್ರೋತ್ಸಾಹಧನ ಖಾತೆಗೆ ಬರುವುದೇ ಇಲ್ಲ. ನಮ್ಮದಲ್ಲದ ಕಾರಣಗಳಿಗೆ ತೊಂದರೆ ಅನುಭವಿಸಬೇಕಿದೆ. ಕಳೆದ ನಾಲ್ಕು ತಿಂಗಳಲ್ಲಿ ಬರೀ 1,500 ರೂ. ಜಮೆ ಆಗಿದೆ’ ಎಂದು ಹಾಸನ ತಾಲ್ಲೂಕು ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಮಹಾಲಕ್ಷ್ಮೀ ಆರೋಪಿಸಿದರು. ಮುಷ್ಕರದಲ್ಲಿ ವಕೀಲರಾದ ಹೇಮಲತಾ ಮಹಿಷಿ, ಎಐಯುಟಿಯುಸಿ ಉಪಾಧ್ಯಕ್ಷ ಕೆ. ರಾಧಾಕೃಷ್ಣ, ಆರೋಗ್ಯ ಇಲಾಖೆ ನಿರ್ದೇಶಕ ನಟರಾಜ್ ಮತ್ತಿತರರು ಭಾಗವಹಿಸಿದ್ದರು. ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನದ ಪ್ರಮಾಣವನ್ನು ಆರು ಸಾವಿರ ರೂ.ಗೆ ಏರಿಕೆ ಮಾಡಬೇಕು ಎಂಬ ಬೇಡಿಕೆ ಇತ್ತು. ಅದನ್ನು ಈಗ ಐದು ಸಾವಿರಕ್ಕೆ ಏರಿಸಲಾಗಿದೆ. ಗೌರವಧನ ಸೇರಿದಂತೆ ಮತ್ತಿತರ ಭತ್ಯೆಗಳ ಮೂಲಕ ಅವರು ಇನ್ನು ಮುಂದೆ ಪ್ರತಿ ತಿಂಗಳು ಕನಿಷ್ಟವೆಂದರೂ ಹತ್ತು ಸಾವಿರ ರೂ ಪಡೆಯಲಿ¨ªಾರೆ.
-ಕೆ.ಆರ್.ರಮೇಶ್‌ಕುಮಾರ್, ಆರೋಗ್ಯ ಸಚಿವ