Advertisement

ಆಶಾ ಕಾರ್ಯಕರ್ತೆಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಚಿಂತನೆ: ಎಸ್.ಟಿ. ಸೋಮಶೇಖರ್

11:47 AM Jun 12, 2020 | sudhir |

ದಾವಣಗೆರೆ: ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಆರ್ಥಿಕ ಚೈತನ್ಯ ತುಂಬುವ ನಿಟ್ಟಿನಲ್ಲಿ ಸಹಕಾರ ಬ್ಯಾಂಕ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸುವ ಚಿಂತನೆ ನಡೆದಿದೆ ಎಂದು ಸಹಕಾರ ಇಲಾಖೆ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.

Advertisement

ಶುಕ್ರವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲಾ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮೂಲಕ ಆಶಾ ಕಾರ್ಯಕರ್ತೆರಿಗೆ ಕಡಿಮೆ ಬಡ್ಡಿ ದರದ ಸಾಲ ಒದಗಿಸುವ ಕುರಿತಂತೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗಿದೆ. ಅತೀ ಶೀಘ್ರದಲ್ಲೇ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದರು.

ಕೋವಿಡ್ ನಿಯಂತ್ರಣಕ್ಕೆ ಆಶಾ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಅಂತಹ ಎಲ್ಲಾ 40-42 ಸಾವಿರ ಕಾರ್ಯಕರ್ತೆಯರಿಗೆ ತಲಾ ಮೂರು ಸಾವಿರದಂತೆ 12.7 ಕೋಟಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಈವರೆಗೆ 11 ಜಿಲ್ಲೆಯಲ್ಲಿ ನೀಡಲಾಗಿದೆ. ಆಶಾ ಕಾರ್ಯಕರ್ತೆಯರು ತಮ್ಮ ಆರೋಗ್ಯದ ಬಗ್ಗೆಯೂ ಹೆಚ್ಚು ಜಾಗ್ರತೆ ವಹಿಸಬೇಕು ಎಂದು ಸಲಹೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next