Advertisement
ಈಗ ಲೋಕಸಭೆ ಚುನಾವಣೆ ಘೋಷಣೆ ಆಗಿದೆ. ಈಗಲೂ ಮತ್ತದೇ ಕೆಲಸ ಮಾಡಬೇಕಿದೆ. ಆದರೆ ಈ ಬಾರಿಯೂ ಸಂಭಾ ವನೆ ಸಿಗುವುದೋ ಇಲ್ಲವೋ ಎಂಬ ಗೊಂದಲ ಇವರದು. ರಾಜ್ಯವ್ಯಾಪಿ ಸುಮಾರು 43 ಸಾವಿರ ಆಶಾ ಕಾರ್ಯಕರ್ತೆಯರಿದ್ದಾರೆ. ಇವರೆಲ್ಲರೂ ಆರೋಗ್ಯ ಮತ್ತು ಕುಟುಂಬ ಇಲಾಖೆ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಾರೆ. ಚುನಾವಣೆ ವೇಳೆ ಇವರು ಜಿಲ್ಲಾ ಚುನಾವಣಾಧಿಕಾರಿಗಳ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿ ಗಳ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಾರೆ.
Related Articles
ಚುನಾವಣೆ ಕಾರ್ಯ ನಿರ್ವಹಿಸಿದರೂ ಸೂಕ್ತ ಸಂಭಾವನೆ ಕೈ ಸೇರದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನಿಯೋಗ ಈಗಾಗಲೇ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಮಾಡಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ದೂರಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿಗದಿಪಡಿಸುವ ಕೆಲಸವನ್ನು ಮಾತ್ರ ಆಶಾ ಕಾರ್ಯಕರ್ತೆಯರು ಮಾಡಬೇಕು. ಬೇರೆ ಕೆಲಸಗಳಿಗೆ ನಿಯೋಜನೆ ಮಾಡಿದಲ್ಲಿ ಜಿಲ್ಲಾಡಳಿತ ಸೂಕ್ತ ಸಂಭಾವನೆ ನೀಡಬೇಕು ಎಂಬ ಆದೇಶವಿದೆ. ಆದರೆ ಈಗ ತಾಂತ್ರಿಕ ನೆಪವೊಡ್ಡಿ ಚುನಾವಣ ಕಾರ್ಯದ ಸಂಭಾವನೆ ನೀಡಿಲ್ಲ. ಈ ಬಗ್ಗೆ ರಾಜ್ಯ ಮುಖ್ಯ ಚುನಾವಣ ಆಯುಕ್ತರನ್ನು ಕೂಡ ಭೇಟಿ ಮಾಡಿ ಮನವಿ ಮಾಡಲಾಗಿದೆ ಎಂದಿದ್ದಾರೆ.
Advertisement
ಗ್ರಾ.ಪಂ. ಚುನಾವಣೆ: 700 ರೂ. ಸಂಭಾವನೆಈ ಹಿಂದೆ ಗ್ರಾ.ಪಂ. ಸಹಿತ ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳೆ ಆಶಾ ಕಾರ್ಯಕರ್ತೆ ಯರು ಮತಗಟ್ಟೆಯಲ್ಲಿ ಕಾರ್ಯ ನಿರ್ವಹಿಸಿದಾಗ ತಲಾ 700ರೂ. ಸಂಭಾವನೆ ನೀಡಲಾಗಿತ್ತು. ಆದರೆ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಕಾರ್ಯವನ್ನು ಅವಗಣಿಸಲಾಗಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ಚುನಾವಣ ಕೆಲಸಗಳಿಗೆ ಆಶಾ ಕಾರ್ಯಕರ್ತೆಯರನ್ನು ಬಳಕೆ ಮಾಡಿಕೊಂಡರೆ ಊಟ-ತಿಂಡಿ, ಪ್ರಯಾಣ ಭತ್ತೆ ಮತ್ತು ತುಟ್ಟಿಭತ್ತೆ ಜತೆಗೆ ಸೂಕ್ತ ಸಂಭಾವನೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ ಒತ್ತಾಯಿಸಿದ್ದಾರೆ. ದೇವೇಶ ಸೂರಗುಪ್ಪ