Advertisement

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಅಶೋಕ್‌ ಸ್ಪರ್ಧೆ?

06:00 AM Jun 27, 2018 | |

ಬೆಂಗಳೂರು: ರಾಜ್ಯದ ಮೂರು ಲೋಕಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಬಿಜೆಪಿಯಲ್ಲಿ ನಡೆದಿದ್ದು, ಮಂಡ್ಯ ಕ್ಷೇತ್ರಕ್ಕೆ ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌ ಹೆಸರು ಕೇಳಿಬರುತ್ತಿದೆ. ಒಕ್ಕಲಿಗ ಸಮುದಾಯವೇ ಹೆಚ್ಚಾಗಿರುವ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿಯಿಂದ ಆರ್‌.ಅಶೋಕ್‌ ಸ್ಪರ್ಧೆ ಮಾಡಿದರಷ್ಟೇ ಪೈಪೋಟಿ ನೀಡಲು ಸಾಧ್ಯ ಎಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ ಅಶೋಕ್‌ ಅವರನ್ನು ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆದಿದೆ.

Advertisement

ಅದೇ ರೀತಿ ಬಳ್ಳಾರಿಯಿಂದ ಮಾಜಿ ಸಂಸದರಾದ ಶಾಂತಾ ಅಥವಾ ಎನ್‌.ವೈ. ಹನುಮಂತಪ್ಪ ಹೆಸರು ಪರಿಶೀಲನೆಯಲ್ಲಿದೆ. ಶಿವಮೊಗ್ಗ ಕ್ಷೇತ್ರದಿಂದ ತಮ್ಮ ಪುತ್ರ ರಾಘವೇಂದ್ರ ಅಥವಾ ವಿಜಯೇಂದ್ರ ಅವರಲ್ಲಿ ಒಬ್ಬರನ್ನು ಕಣಕ್ಕಿಳಿಸಲು ಯಡಿಯೂರಪ್ಪ ಒಲವು ಹೊಂದಿದ್ದಾರೆಂದು ಹೇಳಲಾಗಿದೆ. ಮಂಡ್ಯ ಕ್ಷೇತ್ರದ ಸ್ಪರ್ಧೆ ವಿಚಾರದಲ್ಲಿ ಆರ್‌.ಅಶೋಕ್‌ ಅವರ ಜತೆಯೂ ಯಡಿಯೂರಪ್ಪ ಮಾತನಾಡಿದ್ದಾರೆ. ಪಕ್ಷ ಸೂಚಿಸಿದರೆ ಸ್ಪರ್ಧೆಗೆ ಸಿದ್ಧ ಇರಿ ಎಂದು ಹೇಳಿದ್ದಾರೆಂದು ತಿಳಿದು ಬಂದಿದೆ.

ಮಂಗಳವಾರ ಯಡಿಯೂರಪ್ಪ ಭೇಟಿ ನಂತರ ಪ್ರತಿಕ್ರಿಯಿಸಿದ ಅಶೋಕ್‌, ಮಂಡ್ಯ ಕ್ಷೇತ್ರದಿಂದ ಅಭ್ಯರ್ಥಿ ಆಗುವ ವಿಚಾರದಲ್ಲಿ
ಪಕ್ಷ ಯಾವ ತೀರ್ಮಾನ ಕೈಗೊಳ್ಳುತ್ತದೆಯೋ ಅದಕ್ಕೆ ಬದ್ಧ. ಮೂರು ವರ್ಷ ಮಂಡ್ಯಜಿಲ್ಲಾ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ನನಗೆ ಪಕ್ಷ ದೊಡ್ಡದು. ಮಂಡ್ಯದಲ್ಲಿ ಯಾರು ಎದುರಾಳಿ ಎಂಬುದರ ಮೇಲೆ ಬಿಜೆಪಿಯ ಅಭ್ಯರ್ಥಿ ಯಾರಾಗಬೇಕು ಎಂಬುದು ನಿರ್ಧಾರವಾಗಲಿದೆ ಎಂದು ತಿಳಿಸಿದರು.

ಬೆಂಗಳೂರು: ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ವಿಧಾನಪರಿಷತ್‌ಗೆ ಆಯ್ಕೆ ಮಾಡಿ ಪ್ರತಿಪಕ್ಷ ನಾಯಕಿ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿದೆ ಎಂಬ ಮಾತುಗಳ ಹಿನ್ನೆಲೆಯಲ್ಲಿ ಪರಿಷತ್‌ ಸದಸ್ಯರಾದ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಅರುಣ್‌ ಶಹಾಪುರ ಅವರು ಮಂಗಳವಾರ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದರು. 

ಕೆ.ಎಸ್‌. ಈಶ್ವರಪ್ಪ ಅವರು ವಿಧಾನಸಭೆಗೆ ಆಯ್ಕೆಯಾಗಿರುವುದರಿಂದ ಪರಿಷತ್‌ನಲ್ಲಿ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಸಮರ್ಥರ ನೇಮಕ ಕುರಿತು ಪಕ್ಷದಲ್ಲಿ ಚರ್ಚೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಅರುಣ್‌ ಶಹಾಪುರ,
ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿ ಮಾತುಕತೆ ನಡೆಸಿದರು. ಭೇಟಿಯ ನಂತರ ಮಾತನಾಡಿದ ಅರುಣ್‌ ಶಹಾಪುರ, “ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ನಾನೂ ಆಕಾಂಕ್ಷಿ. ಪಕ್ಷ ಮತ್ತು ಹಿರಿಯರು ಯಾವ ನಿರ್ಣಯ ಕೈಗೊಳ್ಳುತ್ತಾರೋ ಅದಕ್ಕೆ ಬದ್ಧ’ ಎಂದರು.

Advertisement

ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, “ಬೆಂಗಳೂರಿಗೆ ಬಂದಾಗ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡುವುದು ನನ್ನ ಸಂಪ್ರದಾಯ. ಹಾಗೇ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೇನೆ. ಪರಿಷತ್‌ ವಿಪಕ್ಷ ಸ್ಥಾನ ನೀಡುವ ವಿಚಾರದಲ್ಲಿ ಪಕ್ಷದ ತೀರ್ಮಾನಕ್ಕೆ ಬದಟಛಿ. ಹೊಣೆಗಾರಿಕೆ ನೀಡಿದರೆ ನಿಭಾಯಿಸಲು ಸಿದ್ಧ’ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next