Advertisement

ಅಧಿಕಾರಿಗಳ ವಿರುದ್ಧ ಅಶೋಕ್‌ ಗರಂ

12:52 PM Aug 25, 2018 | Team Udayavani |

ಬೆಂಗಳೂರು: ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಸಲ್ಲಿಕೆಯಾಗಿದ್ದ ದೂರುಗಳಿಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ನೀಡದ ಅಧಿಕಾರಿಗಳನ್ನು ಸಮಿತಿ ಅಧ್ಯಕ್ಷ ಆರ್‌.ಅಶೋಕ್‌ ತರಾಟೆಗೆ ತೆಗೆದುಕೊಂಡಿದ್ದಾರೆ.

Advertisement

ವಿಧಾನಸೌಧದಲ್ಲಿ ಶುಕ್ರವಾರ ನಡೆದ ಸಮಿತಿಯ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿಯವರ ಸಮ್ಮುಖದಲ್ಲೇ ಅಧಿಕಾರಿಗಳ ಕಾರ್ಯವೈಖರಿಗೆ ಗರಂ ಆದ ಅವರು, ವರ್ಷಗಳಾದರೂ ಕ್ರಮ ಕೈಗೊಳ್ಳದಿದ್ದರೆ ಸಮಿತಿ ಯಾಕೆ ಇರಬೇಕು ಎಂದು ಪ್ರಶ್ನಿಸಿದರು.

ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಇದುವರೆಗೂ 700 ದೂರುಗಳು ಬಂದಿದ್ದು 254 ಪ್ರಕರಣಗಳಿಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮದ ಬಗ್ಗೆ ವರದಿಯೇ ಸಲ್ಲಿಸಿಲ್ಲ. ಹೀಗಾದರೆ ಹೇಗೆ ಎಂದರು. ಆ.28 ರಂದು ಸಮಿತಿಯ ಸಭೆ ನಿಗದಿಪಡಿಸಿ ಅಷ್ಟರೊಳಗೆ 254 ಪ್ರಕರಣಗಳಿಗೆ ಸಂಬಂಧಿಸಿದ ವರದಿ ಸಲ್ಲಿಸಬೇಕು ಎಂದು ತಾಕೀತು ಮಾಡಿದರು.

ಸಮಾಜ ಕಲ್ಯಾಣ ಹಾಗೂ ಕಾರ್ಮಿಕ ಇಲಾಖೆಗಳಲ್ಲಿನ ಅವ್ಯವಹಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮದ ಬಗ್ಗೆಯೂ ಆ ಸಭೆಯಲ್ಲಿ ಮಾಹಿತಿ ನೀಡಬೇಕು ಎಂದು ಸೂಚಿಸಿದರು ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next