ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ಪಕ್ಷದ ಅಧ್ಯಕ್ಷ ಹುದ್ದೆಯ ಆಫರ್ ನೀಡಿದ್ದಾರೆ ಎಂಬ ಸುದ್ದಿಯನ್ನು ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬುಧವಾರ (ಆಗಸ್ಟ್ 24) ನಿರಾಕರಿಸಿದ್ದಾರೆ.
ಇದನ್ನೂ ಓದಿ:ದೋಷವಿದೆ ಎಂದು ಹೇಳಿ ಸ್ವಾಮೀಜಿಯಿಂದ 5 ವರ್ಷ ಅತ್ಯಾಚಾರ: ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್
ಕಾಂಗ್ರೆಸ್ ವರಿಷ್ಠರು ತನಗೆ ಜವಾಬ್ದಾರಿಯನ್ನು ನೀಡಿದ್ದು, ಅದರಂತೆ ರಾಜಸ್ಥಾನದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಗೆಹ್ಲೋಟ್ ಈ ಸಂದರ್ಭದಲ್ಲಿ ತಿಳಿಸಿರುವುದಾಗಿ ವರದಿಯಾಗಿದೆ.
ನನಗೆ ಅಧ್ಯಕ್ಷ ಸ್ಥಾನದ ಆಫರ್ ನೀಡಿದ್ದರು ಎಂಬ ವಿಚಾರ ಮಾಧ್ಯಮಗಳ ಮೂಲಕ ತಿಳಿಯಿತು. ಈ ಬಗ್ಗೆ ನನಗೇನೂ ಮಾಹಿತಿ ಇಲ್ಲ. ನನಗೆ ಹೈಕಮಾಂಡ್ ಏನು ಜವಾಬ್ದಾರಿ ನೀಡಿದೆಯೋ ಅದನ್ನು ನಾನು ನಿರ್ವಹಿಸುತ್ತಿದ್ದೇನೆ ಎಂದು ಗೆಹ್ಲೋಟ್ ಪ್ರತಿಕ್ರಿಯೆ ನೀಡಿದ್ದಾರೆ.
ಮುಂಬರುವ ಗುಜರಾತ್ ಚುನಾವಣೆಯ ವೀಕ್ಷಕನಾಗಿ ನಾನು ಕಾರ್ಯನಿರ್ವಹಿಸಲಿದ್ದೇನೆ. ಜೊತೆಗೆ ರಾಜಸ್ಥಾನದ ಹೊಣೆಗಾರಿಕೆಯೂ ಇದೆ. ಉಳಿದೆಲ್ಲಾ ವಿಚಾರ ನಾನು ಮಾಧ್ಯಮಗಳ ಮೂಲಕವೇ ಗಮನಕ್ಕೆ ಬಂದಿದೆ ಎಂದು ಗೆಹ್ಲೋಟ್ ಹೇಳಿದ್ದಾರೆ.