ರಾಜಸ್ಥಾನ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿರುವುದಾಗಿ ವರದಿ ತಿಳಿಸಿದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಕುರಿತು ಸಾರ್ವಜನಿಕರು ಎಚ್ಚರ ವಹಿಸಬೇಕೆಂದು ಹೇಳುವ ಸಂದರ್ಭ ತಾನೂ ಕೋವಿಡ್ ತಪಾಸಣೆ ನಡೆಸಿದ್ದು ಇದರ ವರದಿ ಕೈಸೇರಿದ್ದು ಅದರಲ್ಲಿ ಕೋವಿಡ್ ಸೋಂಕು ದೃಢಪಟ್ಟಿರುವುದು ಸಾಬೀತಾಗಿದೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಸಿಎಂ “ನಾನು ಕೋವಿಡ್‌ನ ಸೌಮ್ಯ ರೋಗಲಕ್ಷಣಗಳಿಂದ ಸೋಂಕಿಗೆ ಒಳಗಾಗಿದ್ದೇನೆ. ವೈದ್ಯರ ಸಲಹೆಯ ಪ್ರಕಾರ, ನಾನು ಮುಂದಿನ ಕೆಲವು ದಿನಗಳವರೆಗೆ ನನ್ನ ನಿವಾಸದಿಂದಲೇ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ. ನೀವೆಲ್ಲರೂ ಕಾಳಜಿ ವಹಿಸಿ ಮತ್ತು ಕೋವಿಡ್ ನಿಯಮಗಳನ್ನು ಅನುಸರಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.
ಇದರ ಜೊತೆಗೆ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಕೂಡಾ ಟ್ವೀಟ್ ಮಾಡಿದ್ದು “ಕೋವಿಡ್ ಪರೀಕ್ಷೆಯಲ್ಲಿ ನನ್ನ ವರದಿಯು ಧನಾತ್ಮಕವಾಗಿದೆ. ವೈದ್ಯರ ಸಲಹೆಯ ಮೇರೆಗೆ ನಾನು ಸಂಪೂರ್ಣ ಪ್ರತ್ಯೇಕವಾಗಿದ್ದೇನೆ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ತಮ್ಮನ್ನು ಪರೀಕ್ಷಿಸಿಕೊಳ್ಳಬೇಕು ಮತ್ತು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಜೀವಕ್ಕೆ ಮುಳುವಾದ ಉಡುಗೊರೆ: ಹೋಮ್ ಥಿಯೇಟರ್ ಸಿಡಿದು ನವ ವಿವಾಹಿತ ಸೇರಿ ಇಬ್ಬರು ಮೃತ್ಯು