ಬೆಂಗಳೂರು: ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರಗತಿ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಚಿವ ಆರ್. ಅಶೋಕ್ ಅವರು ಆದಿಚುಂಚನಗಿರಿ ಶ್ರೀಗಳಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರ ಹೆಗಲ ಮೇಲೆ ಕೈಯಿಟ್ಟು ಫೋಟೋ ಗೆ ಪೋಸ್ ನೀಡಿರುವ ಬಗ್ಗೆ ವಿಪಕ್ಷಗಳು ಸೇರಿ ಹಲವರು ವ್ಯಾಪಕ ಟೀಕೆ ಮಾಡುತ್ತಿದ್ದಾರೆ.
ಶುಕ್ರವಾರ ಪ್ರತಿಮೆ ಅನಾವರಣದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಸ್ವಾಮೀಜಿಗಳು ಸೇರಿ ಗಣ್ಯರು ಫೋಟೋ ಕ್ಲಿಕ್ಕಿಸಿಕೊಂಡಿದ್ದರು. ಈ ವೇಳೆ ಸಚಿವ ಅಶೋಕ್ ಅವರು ಶ್ರೀಗಳ ಬೆನ್ನ ಹಿಂದೆ ನಿಂತಿದ್ದು , ಶ್ರೀಗಳ ಹೆಗಲ ಮೇಲೆ ಎರಡು ಕೈಗಳನ್ನು ಇಟ್ಟಿದ್ದು ಕಂಡು ಬಂದಿದೆ.
”ಸ್ವಾಮಿಜಿಗಳಿಗೆ ಅವರದ್ದೇ ಆದ ಗೌರವವಿರುತ್ತದೆ. ಘನತೆ ಇರುತ್ತದೆ. ಹೆಗಲ ಮೇಲೆ ಕೈ ಹಾಕುವಷ್ಟು ಆದಿಚುಂಚನಗಿರಿ ಶ್ರೀಗಳು ಆರ್. ಅಶೋಕ್ ಅವರಿಗೆ ಸದರ ಎನಿಸಿದ್ದಾರೆಯೇ? ಇದೇ ರೀತಿ ಮೋದಿ ಹೆಗಲಿಗೆ ಕೈ ಹಾಕುವ ಧೈರ್ಯವಿದೆಯೇ? ಧರ್ಮ, ಸಂಸ್ಕೃತಿಯ ಬಗ್ಗೆ ಮಾತಾಡುವ ಬಿಜೆಪಿ ನಾಯಕರಿಗೆ ಕನಿಷ್ಠ ಸಂಸ್ಕಾರದ ಜ್ಞಾನವಿಲ್ಲ” ಎಂದು ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದೆ.