ತಿರುವನಂತಪುರಂ: ಕೇರಳ ವಿಧಾನಸಭೆಯ ಮೊದಲ ಅಧಿವೇಶನ ಸೋಮವಾರ(ಮೇ 24) ಆರಂಭಗೊಂಡಿದ್ದು, ನೂತನವಾಗಿ ಆಯ್ಕೆಯಾದ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದು, ಈ ಸಂದರ್ಭದಲ್ಲಿ ಕಾಸರಗೋಡಿನ ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ಅವರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿ ಗಮನ ಸೆಳೆದರು.
ಇದನ್ನೂ ಓದಿ:ಕಾರ್ಕಳ ತಾಲೂಕಿನ ಮಾಳ: ಅನೈತಿಕ ಸಂಬಂಧದ ಅನುಮಾನದಿಂದ ಜತೆಯಲ್ಲಿ ಮಲಗಿದ್ದವನ ಕೊಲೆ
ಕೇರಳ ವಿಧಾನಸಭಾ ಕಲಾಪದಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ವಿವಿಧ ಭಾಷೆಗಳಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕೆಲವು ಶಾಸಕರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದು, ಕೆಲವರು ಶಾಸ್ತ್ರೋಕ್ತವಾಗಿ ಪ್ರಮಾಣವಚನ ಸ್ವೀಕರಿಸಿದರು.
ಮಂಜೇಶ್ವರದ ಶಾಸಕ ಎ.ಕೆ.ಎಂ ಆಶ್ರಫ್ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದು, ಮುವಾಟ್ಟುಪುಳ ಶಾಸಕ ಮ್ಯಾಥ್ಯೂ ಕುಝಾಲ್ನಾಡನ್ ಅವರು ಇಂಗ್ಲೀಷ್ ನಲ್ಲಿ ಪ್ರಮಾಣವಚನ ಸ್ವೀಕರಿಸಿರುವುದಾಗಿ ವರದಿ ತಿಳಿಸಿದೆ.
ಕಳೆದ ತಿಂಗಳು ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಕೆಎಂ ಅಶ್ರಫ್, ತಮ್ಮ ಪ್ರತಿಸ್ಪರ್ಧಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ಅವರನ್ನು ಪರಾಜಯಗೊಳಿಸಿದ್ದರು.
ಶಾಸಕರ ಪ್ರಮಾಣವಚನ ಸ್ವೀಕಾರ ಇಂಗ್ಲಿಷ್ ವರ್ಣಮಾಲೆ ಮೇಲೆ ಆಧಾರಿತವಾಗಿದ್ದು, ಅದರಂತೆ ಇಂಡಿಯನ್ ಮುಸ್ಲಿಂ ಲೀಗ್ ಶಾಸಕ ಪಿ.ಅಬ್ದುಲ್ ಹಮೀದ್ ಮೊದಲು ಪ್ರಮಾಣವಚನ ಸ್ವೀಕರಿಸಿದ್ದರು. ಕೋವಿಡ್ ಸೋಂಕಿನಿಂದ ಕ್ವಾರಂಟೈನ್ ನಲ್ಲಿರುವ ಕಾರಣ ಶಾಸಕರಾದ ಕೆ.ಬಾಬು ಮತ್ತು ಎ.ವಿನ್ಸೆಂಟ್ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಸ್ಪೀಕರ್ ಗೆ ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ.