Advertisement
ಶ್ರೀ ದೇಗುಲ ಸಂಪೂರ್ಣ ಹೂವಿನ ಅಲಂಕಾರದಿಂದ ಕಂಗೊಳಿಸುತ್ತಿದ್ದು ಈ ಸಂದರ್ಭದಲ್ಲಿ ನಂಬಿದ ಸಹಸ್ರಾರು ಭಕ್ತರು ಶ್ರೀ ಸನ್ನಿಧಿಯಲ್ಲಿ ನೆರೆದಿದ್ದರು.
ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ವಿನಾಯಕ ಚತುರ್ಥಿಯಂದು ಮುಂಜಾನೆಯಿಂದ ವರುಣ ಆಗಮನದ ನಡುವೆಯೂ ಸುಮಾರು ನಲವತ್ತು ಸಾವಿರಕ್ಕೂ ಅಧಿಕ ಭಕ್ತರು ಶ್ರೀ ದೇವರ ದರ್ಶನ ಪಡೆದು 8 ಸಾವಿರಕ್ಕೂ ಅಧಿಕ ಭಕ್ತಾದಿಗಳು ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡಿದ್ದರು ಎಂದು ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆನುವಂಶಿಕ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ ಉದಯವಾಣಿಗೆ ತಿಳಿಸಿದ್ದಾರೆ. ದೇವಸ್ಥಾನದ ಆನುವಂಶಿಕ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಆನುವಂಶಿಕ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ, ಕೆ. ವಿಟuಲ ಉಪಾಧ್ಯಾಯ ಆನುವಂಶಿಕ ಪರ್ಯಾಯ ಅರ್ಚಕರಾದ ಕೆ. ರಮಾನಂದ ಉಪಾಧ್ಯಾಯ ಮತ್ತು ಸಹೋದರರು ಉಪಸ್ಥಿತರಿದ್ದರು.
Related Articles
ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ವಿನಾಯಕ ಚತುರ್ಥಿ ಹಿನ್ನೆಲೆಯಲ್ಲಿ ವಿಶೇಷವಾಗಿ ಪೊಲೀಸ್ ತುಕಡಿಯನ್ನು ನಿಯೋಜಿಸಲಾಗಿದ್ದು ಸುರಕ್ಷೆಗೆ ಹೆಚ್ಚಿನ ಗಮನ ನೀಡಲಾಗಿದೆ .
Advertisement
ವಿಶೇಷ ವ್ಯವಸ್ಥೆದೇಗುಲ ಸಂಪೂರ್ಣವಾಗಿ ಹೂವಿನಿಂದ ಅಲಂಕಾರಗೊಳಿಸಲಾಗಿದೆ. ಸುಮಾರು 13 ಸಾವಿರಕ್ಕೂ ಅಧಿಕ ಪಂಚಕಜ್ಜಾಯ, ಸುಮಾರು 10 ಸಾವಿರ ಲಡ್ಡು, ಸುಮಾರು 5 ಸಾವಿರ ಕಡಬು (ಮೂಡೆ) ಹಾಗೂ ಅಪಾರ ಭಕ್ತ ಸಮೂಹವೇ ದೇಗುಲಕ್ಕೆ ಹರಿದು ಬರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸುಮಾರು ಎಂಟುವರೆ ಸಾವಿರಕ್ಕೂ ಅಧಿಕ ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆ ಮಾಡಲಾಗಿದೆ.