Advertisement
ಸ್ಪೇರ್ ಟ್ರಾವೆಲ್ ಮೀಡಿಯಾ ಮತ್ತು ಎಕ್ಸಿಬೀಷನ್ ಸಂಸ್ಥೆ ಆಯೋಜಿಸಿದ್ದ ’ಭವಿಷ್ಯದ ಕರ್ನಾಟಕ ಶೃಂಗಸಭೆ- 2020’ಯಲ್ಲಿ ಆನ್‌ಲೈನ್ ಮೂಲಕವೇ ಮುಖ್ಯ ಭಾಷಣ ಮಾಡಿದ ಅವರು, ಈಗಾಗಲೇ ರಾಜ್ಯವು 18 ಲಕ್ಷ ಕೋಟಿ ರೂ. ಜಿಡಿಪಿಯನ್ನು ಹೊಂದಿದೆ. ಐದು ವರ್ಷಗಳಲ್ಲಿ ಇದರ ಪ್ರಮಾಣ 36 ಲಕ್ಷ ಕೋಟಿ ರೂ. ದಾಟಲಿದೆ. ಅದರ ನಂತರದ ಐದು ವರ್ಷಗಳಲ್ಲಿ 75 ಲಕ್ಷ ಕೋಟಿ ರೂ. ಜಿಡಿಪಿ ಹೊಂದುವುದು ನಮ್ಮ ಹೆಗ್ಗುರಿ ಎಂದು ನುಡಿದರು.
Related Articles
Advertisement
ಇದೇ ರೀತಿಯಲ್ಲಿ ಕೈಗಾರಿಕೆ ಭೂಮಿ ಸಿಗುವುದೂ ಸೇರಿದಂತೆ ಬೇರೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದಪಡಿ ಕಾಯ್ದೆ, ಕಾರ್ಮಿಕ ಕಾಯ್ದೆಗಳ ಸರಳೀಕರಣ ಸೇರಿದಂತೆ ಹತ್ತಾರು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇದರಿಂದ ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವುದು ಅತ್ಯಂತ ಸರಳವಾಗಿದೆ ಎಂದು ಅವರು ಹೇಳಿದರು.
ಸಿಂಗಲ್ ವಿಂಡೋ ವ್ಯವಸ್ಥೆ:
ಇಡೀ ದೇಶದಲ್ಲಿಯೇ ಕೈಗಾರಿಕೆ ಕ್ಷೇತ್ರದಲ್ಲಿ ರಾಜ್ಯ ಅತ್ಯಂತ ಮಾದರಿ ನೀತಿಯನ್ನು ಅನುಸರಿಸುತ್ತಿದೆ. ಯಾವುದೇ ಕೈಗಾರಿಕೆಯನ್ನಾಗಲಿ, ಅದು ಎಷ್ಟೇ ದೊಡ್ಡ ಕೈಗಾರಿಕೆಯನ್ನಾಗಲಿ ಈ ನೆಲದ ಕಾನೂನನ್ನು ಗಮನದಲ್ಲಿಟ್ಟುಕೊಂಡು ಕೇವಲ ಒಂದು ಅರ್ಜಿ ಸಲ್ಲಿಸಿ ಸ್ಥಾಪಿಸಬಹುದು. ಆಮೇಲೆ ಸರಕಾರದಿಂದ ಅನುಮತಿ ಪಡೆಯಬಹುದು. ಸರಕಾರದ ಅಧೀನದಲ್ಲಿರುವ ಎಲ್ಲ ಸಂಸ್ಥೆಗಳನ್ನು ಒಂದೆಡೆ ಅನುಸಂಧಾನಗೊಳಿಸಲಾಗಿದ್ದು, ಏಕಗವಾಕ್ಷಿ ಮೂಲಕ ಎಲ್ಲ ಬಗೆಯ ಅನುಮತಿಗಳನ್ನು ಯಾವುದೇ ಅಡ್ಡಿ- ಆತಂಕವಿಲ್ಲದೆ ಪಡೆದುಕೊಳ್ಳಬಹುದು. ಗುಜರಾತ್ ಮತ್ತು ರಾಜಸ್ತಾನ ರಾಜ್ಯಗಳಲ್ಲಿ ಇಂಥ ವ್ಯವಸ್ಥೆ ಇದೆ. ಆದರೆ ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ಈ ಅವಕಾಶವಿದೆ. ಆದರೆ ನಮ್ಮ ರಾಜ್ಯದಲ್ಲಿ ಬೃಹತ್ ಕೈಗಾರಿಕೆಗಳಿಗೂ ಈ ಅವಕಾಶ ಕಲ್ಪಿಸಲಾಗಿದೆ ಎಂದು ಡಾ. ಅಶ್ವತ್ಥನಾರಾಯಣ ಹೇಳಿದರು.
ಸದೃಢ ಕರ್ನಾಟಕವನ್ನು ಕಟ್ಟಲು ಎಲ್ಲ ರೀತಿಯ ಸವಾಲುಗಳನ್ನು ಮೆಟ್ಟಿ ನಿಂತು ಸರಕಾರ ಕೆಲಸ ಮಾಡುತ್ತಿದೆ. ರಾಜಕೀಯ ಸವಾಲುಗಳನ್ನು ಕೂಡ ಯಶಸ್ವಿಯಾಗಿ ಎದುರಿಸಲಾಗುತ್ತಿದೆ. ಏನೇ ಆದರೂ ಅಭಿವೃದ್ಧಿಯಲ್ಲಿ ರಾಜಿ ಪ್ರಶ್ನೆಯೇ ಇಲ್ಲ. ಇದು ಸರಕಾರದ ಒಂದು ಅಂಶದ ನೀತಿಯಾಗಿದೆ ಎಂದು ಅವರು ಹೇಳಿದರು.
ಕೋವಿಡ್ ಕಂಟ್ರೋಲ್’ನಲ್ಲಿ:
ರಾಜ್ಯದಲ್ಲಿ ಸದ್ಯಕ್ಕೆ ಕೋವಿಡ್-19 ಸೋಂಕು ನಿಯಂತ್ರಣದಲ್ಲಿದೆ ಎಂದ ಉಪ ಮುಖ್ಯಮಂತ್ರಿ, ಇನ್ನೂ ಸರಕಾರದ ವಶದಲ್ಲಿರುವ ಒಟ್ಟು ಕೋವಿಡ್ ಹಾಸಿಗೆಗಳ ಪೈಕಿ ಶೇ.30ರಷ್ಟು ಖಾಲಿ ಇವೆ. ಈಗ ಬೇಡಿಕೆಗಿಂತ ನಮ್ಮಲ್ಲಿರುವ ಸೌಲಭ್ಯಗಳೇ ಹೆಚ್ಚಾಗಿವೆ. ಹೀಗಾಗಿ ಯಾವುದೇ ಆತಂಕವಿಲ್ಲ. ಜನರು ಧೈರ್ಯವಾಗಿರಬಹುದು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಸ್ಟಾರ್ಟ್ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಅನಿಲ್ ಶೆಟ್ಟಿ ಮತ್ತು ಕೀರ್ತಿನಾರಾಯಣ ಮುಂತಾದವರು ಪಾಲ್ಗೊಂಡಿದ್ದರು.