Advertisement
ಕೆಂಪೇಗೌಡ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು 6ನೇ ವಯಸ್ಸಿಗೆ ಶಿಕ್ಷಣ ಪಡೆಯಲು ನಮ್ಮೂರಿನಿಂದ ಬೆಂಗಳೂರಿಗೆ ಬಂದೆ. ಇಲ್ಲಿನ ರಾಜಾಜಿನಗರದ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಸೇರಿ ನನ್ನ ವಿದ್ಯಾಭ್ಯಾಸ ಆರಂಭಿಸಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಕೆಂಪೇಗೌಡರು ಕಟ್ಟಿದ ಪ್ರದೇಶ. ತಮಿಳುನಾಡಿನ ಗಡಿ ಭಾಗದಲ್ಲಿ ಸಂಗಮದ ಬಳಿ ಕೆಂಪೇಗೌಡರ ಕೋಟೆ ಇದೆ. ಅದರ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಆ ಕೋಟೆ ಸಮೀಪ ನಿಜಲಿಂಗಪ್ಪ ಅವರ ಮನೆ ಪಕ್ಕ ವೀರೇಂದ್ರ ಪಾಟೀಲ್ ಅವರ ಮನೆ ಇದೆ. ಅದರ ಪಕ್ಕದಲ್ಲಿ ನನ್ನ ತಂದೆ ದೊಡ್ಡಹಾಲಹಳ್ಳಿ ಕೆಂಪೇಗೌಡರ ಮನೆ ಇದೆ. ಇತ್ತೀಚೆಗೆ ಅದನ್ನು ಮಾರಿದ್ದೇನೆ. ಇದು ನನಗೂ ಕೆಂಪೇಗೌಡ ಕಟ್ಟಿದ ಬೆಂಗಳೂರಿಗೆ ಇರುವ ಸಂಬಂಧ ಎಂದರು.
Related Articles
Advertisement
ಬೆಂಗಳೂರು ಕೆಲವು ಭಾಗಗಳು ಮಾತ್ರ ಯೋಜಿತ ನಗರವಾಗಿದ್ದು, ಉಳಿದ ಭಾಗಗಳು ಯೋಜನೆ ರಹಿತವಾಗಿ ಬೆಳೆದುಕೊಂಡಿದೆ. ಇಲ್ಲಿನ ಹವಾಮಾನದಲ್ಲಿ ಬದುಕಿದವರು ಇದನ್ನು ಬಿಟ್ಟು ಹೋಗುವುದಿಲ್ಲ. ಈ ಬೆಂಗಳೂರು ನೆಲದಲ್ಲಿ ಕೆಂಪೇಗೌಡ, ಕೆಂಗಲ್ ಹನುಮಂತಯ್ಯ, ಬಾಲಗಂಗಾಧರನಾಥ ಸ್ವಾಮೀಜಿ, ಶಿವಕುಮಾರ ಸ್ವಾಮಿ ಹುಟ್ಟಿದ್ದಾರೆ. ಇದು ಈ ನೆಲದ ವೈಶಿಷ್ಟ್ಯತೆ. ಇದನ್ನು ಧರ್ಮವಾಗಿ, ಅಭಿವೃದ್ಧಿ ಹಾಗೂ ಪ್ರಗತಿಯಾಗಿದೆ ಉಳಿಸಿಕೊಂಡು ಹೋಗಬೇಕು. ಹೀಗಾಗಿ ಈ ಬೆಂಗಳೂರು ಅಭಿವೃದ್ಧಿ ಮಾಡಬೇಕು. ನಾನು ಬಹಳ ಉತ್ಸುಕತೆಯಿಂದ ಬೆಂಗಳೂರು ನಗರದ ಜವಾಬ್ದಾರಿ ಹೊತ್ತುಕೊಂಡಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು.