Advertisement

ಹಿಂದೆಂದೂ ಕಾಣದ ಸಿನಿಮಾ ಅನುಭವ!: ಪುನೀತ್ ಡ್ರೀಮ್ ಪ್ರಾಜೆಕ್ಟ್ ಬಗ್ಗೆ ಅಶ್ವಿನಿ ಟ್ವೀಟ್

04:32 PM Dec 05, 2021 | Team Udayavani |

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಡ್ರೀಮ್ ಪ್ರಾಜೆಕ್ಟ್ ಡಾಕ್ಯುಮೆಂಟರಿಯ ಟೈಟಲ್ ಟೀಸರ್ ಬಿಡುಗಡೆಯ ಬಗ್ಗೆ ದಿನಾಂಕ ನಿಗದಿಯಾಗಿದೆ. ಡಿ.6ರಂದು ಇದರ ಟೈಟಲ್ ಟೀಸರ್ ಬಿಡುಗಡೆಯಾಗಲಿದೆ. ಇದೀಗ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಮತ್ತಷ್ಟು ಮಾಹಿತಿ ನೀಡಿದ್ದು, ಡಿ.6ರಂದು ಬೆಳಗ್ಗೆ 10 ಗಂಟೆಗೆ ಪಿಆರ್ ಕೆ ಸ್ಟುಡಿಯೋದ ಯುಟ್ಯೂಬ್ ಚಾನೆಲ್ ನಲ್ಲಿ ಟೈಟಲ್ ಟೀಸರ್ ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅಶ್ವಿನಿ, “ಹಿಂದೆಂದೂ ಕಾಣದ ಸಿನಿಮಾ ಅನುಭವ! ನಿಮ್ಮ ಮುಂದೆ ನಾಳೆ ಪಿಆರ್ ಕೆ ಸ್ಟುಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ನಟಿ ಜಾಕ್ವೆಲಿನ್ ಗೆ 10 ಕೋಟಿ ರೂ ಮೌಲ್ಯದ ಉಡುಗೊರೆ ನೀಡಿದ ಸುಕೇಶ್: ವರದಿ

ಎಲ್ಲ ಅಂದುಕೊಂಡಂತೆ ನಡೆದಿದ್ದರೆ, ಇದೇ ನವೆಂಬರ್‌ 1ರಂದು ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ತಮ್ಮ “ಪಿಆರ್‌ಕೆ ಪ್ರೊಡಕ್ಷನ್ಸ್‌ ನಿಂದ ಮಹತ್ವದ ಘೋಷಣೆಯೊಂದನ್ನು ನೀಡುವ ಸಿದ್ಧತೆಯಲ್ಲಿದ್ದರು. ತಮ್ಮ ಪ್ರೊಡಕ್ಷನ್ಸ್‌ ನಲ್ಲಿ ಕರ್ನಾಟಕದ ಬಗ್ಗೆ ಒಂದು ಡಾಕ್ಯುಮೆಂಟರಿ ಮಾಡಿದ್ದ ಪುನೀತ್‌ ರಾಜಕುಮಾರ್‌, ತಮ್ಮ ಹೊಸ ಯೋಜನೆಯ ಅಧಿಕೃತ ಘೋಷಣೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿಯೂ ಮಾಹಿತಿಯನ್ನು ಹಂಚಿಕೊಂಡಿದ್ದರು. “ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂದು ಪುನೀತ್‌ ಪೋಸ್ಟ್‌ ಮಾಡಿದ್ದರು.

Advertisement

ಆದರೆ ನಂತರ ನಡೆದ ವಿಧಿಯಾಟ ಬೇರೆಯದೇ ಆಗಿತ್ತು. ಪುನೀತ್‌ ರಾಜಕುಮಾರ್‌ ಅವರ ಕನಸಿನ ಘೋಷಣೆಗೂ ಮುನ್ನವೇ ಅಕಾಲಿಕ ಮೃತ್ಯು ಅವರನ್ನು ತನ್ನತ್ತ ಕರೆಸಿಕೊಂಡಿತ್ತು. ಪುನೀತ್‌ ರಾಜಕುಮಾರ್‌ ದೈಹಿಕವಾಗಿ ಇಲ್ಲದಿದ್ದರೂ, ಅವರ ಕನಸುಗಳನ್ನು ನನಸು ಮಾಡಲು ಪುನೀತ್‌ ರಾಜಕುಮಾರ್‌ ಕುಟುಂಬ ಮತು “ಪಿಆರ್‌ಕೆ ಪ್ರೊಡಕ್ಷನ್ಸ್‌’ ಟೊಂಕಕಟ್ಟಿ ನಿಂತಿದೆ.

ಅಮೋಘ ವರ್ಷ ಜತೆ ಸೇರಿ ಪುನೀತ್‌ ರಾಜಕುಮಾರ್‌ “ವೈಲ್ಡ್ ಕರ್ನಾಟಕ’ ಡಾಕ್ಯುಮೆಂಟರಿ ಸಿದ್ಧಪಡಿಸಿದ್ದರು. ರಾಜ್ಯದ ನಾನಾ ಭಾಗಗಳಲ್ಲಿ ಇದನ್ನು ಶೂಟ್‌ ಮಾಡಲಾಗಿತ್ತು. ಈ ಡಾಕ್ಯುಮೆಂಟರಿಯಲ್ಲಿ ಪುನೀತ್‌ ಕೂಡ ಇದರಲ್ಲಿ ಕಾಣಿಸಿಕೊಂಡಿದ್ದಾರೆ. “ಪಿಆರ್‌ಕೆ ಪ್ರೊಡಕ್ಷನ್ಸ್‌’ನಲ್ಲಿ ನಿರ್ಮಾಣವಾಗಿರುವ ಕರ್ನಾಟಕದ ಬಗ್ಗೆ ಇರುವ ಡಾಕ್ಯುಮೆಂಟರಿಯ ಟೈಟಲ್‌ ಟೀಸರ್‌ ಡಿ. 6ಕ್ಕೆ ರಿಲೀಸ್‌ ಆಗಲಿದೆ.

Advertisement

Udayavani is now on Telegram. Click here to join our channel and stay updated with the latest news.