Advertisement
ಸುಂಕದಕಟ್ಟೆ ನಿವಾಸಿಯಾದ ಎಎಸ್‌ಐ ಈ ತಿಂಗಳು ನಿವೃತ್ತರಾಗಬೇಕಿತ್ತು. ಎಎಸ್‌ಐ ಹೃದಯರೋಗ, ರಕ್ತದೊತ್ತಡ ಕಾಯಿಲೆಗಳಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ರಜೆ ಮೇಲೆ ಕಳುಹಿಸಲಾಗಿತ್ತು. ಆದರೆ, ಭಾನುವಾರ ಮನೆಯಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಆರೋಗ್ಯ ಇಲಾಖೆಯ ಮಾರ್ಗಸೂಚಿ ಅನ್ವಯ ಮೃತರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ಸೋಮವಾರ ವರದಿ ಬಂದಿದ್ದು ಬಳಿಕ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
Related Articles
Advertisement
(ಈ ಪೈಕಿ ಜೆ.ಜೆ.ನಗರ, ಹೆಬ್ಬಗೋಡಿ, ಜೆ.ಬಿ.ನಗರ, ಬೈಯಪ್ಪನ ಹಳ್ಳಿ, ಸಿಸಿಬಿ ಸೇರಿ ಕೆಲ ಠಾಣೆಗಳ ಸೀಲ್‌ಡೌನ್ ತೆರವುಗೊಳಿಸಲಾಗಿದೆ) ಈ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 14 ಮಂದಿಗೆ ಕೋವಿಡ್ 19 ದೃಢಪಟ್ಟಿದೆ. ಮೂವರು ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. ಇನ್ನುಳಿದವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.
ಪೊಲೀಸರಿಗೆ ಅಗತ್ಯ ಸೂಚನೆ: ಪೊಲೀಸರು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಸ್ಯಾನಿಟೈಸರ್, ಕೈಗವಸು ಬಳಸಬೇಕು. ಡಿಸಿಪಿಗಳು ಪೊಲೀಸ್ ವಸತಿ ಗೃಹಗಳಿಗೆ ಭೇಟಿ ನೀಡಿ ಸಿಬ್ಬಂದಿ ಹಾಗೂ ಕುಟುಂಬ ಸದಸ್ಯರಿಗೆ ಧೈರ್ಯ ನೀಡಬೇಕು ಎಂದು ಸೂಚಿಸಲಾಗಿದೆ. ಪೊಲೀಸರು ಬಹಳ ಅಪಾಯದ ಸಂದರ್ಭದಲ್ಲಿ ಕೆಲಸ ಮಾಡುತ್ತಿದ್ದೇವೆ. ಆದರೂ ಧೃತಿಗೆಡದೆ ಧೈರ್ಯದಿಂದ ಆರೋಗ್ಯ ಸುರಕ್ಷತಾ ಕ್ರಮಗಳ ಜತೆ ಕರ್ತವ್ಯ ನಿರ್ವಹಿಸಬೇಕು ಎಂದು ಮನವಿ ಮಾಡಿದ್ದೇನೆ ಎಂದು ಭಾಸ್ಕರ್ ರಾವ್ ಹೇಳಿದರು.
420ಕ್ಕೂ ಅಧಿಕ ಮಂದಿ ಕ್ವಾರಂಟೈನ್: ಲಾಕ್‌ಡೌನ್ ಸಡಿಲಿಕೆ ಬಳಿಕ ಜನದಟ್ಟಣೆ ಹೆಚ್ಚಾಗಿದೆ. ಅಂತಾರಾಜ್ಯ ಸಂಚಾರ ಕೂಡ ಅಧಿಕವಾಗಿದೆ. ಕಳೆದ ಎರಡೂವರೆ ತಿಂಗಳಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿರಲಿಲ್ಲ. ಆದರೆ, ಲಾಕ್‌ಡೌನ್ ಸಡಿಲಿಕೆ ಬಳಿಕ ಆರೋಪಿಗಳ ಬಂಧನ, ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಕೆಲಸ, ಬೀಟ್ ಹೆಚ್ಚಳ ಮಾಡುತ್ತಿರುವುದರಿಂದ ಸೋಂಕು ತಗುಲುತ್ತಿದೆ. ಇದುವರೆಗೂ 13 ಮಂದಿಗೆ ಸೋಂಕು ದೃಢಪಟ್ಟಿದೆ. ಮೂವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 420ಕ್ಕೂ ಅಧಿಕ ಮಂದಿ ಕ್ವಾರಂಟೈನ್‌ನಲ್ಲಿ ಇದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದರು.