ಪಲ್ಲೆಕೆಲೆ: ಏಷ್ಯಾ ಕಪ್ 2023 ಕೂಟದ ತನ್ನ ಎರಡನೇ ಪಂದ್ಯಕ್ಕೆ ಟೀಂ ಇಂಡಿಯಾ ಸಜ್ಜಾಗಿದೆ. ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ಇದೇ ಮೊದಲ ಬಾರಿಗೆ ಭಾರತ ಮತ್ತು ನೇಪಾಳ ತಂಡಗಳು ಮುಖಾಮುಖಿಯಾಗುತ್ತಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಭಾರತವು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಇಂದಿನ ಪಂದ್ಯಕ್ಕೆ ಭಾರತ ಒಂದು ಅನಿವಾರ್ಯ ಬದಲಾವಣೆ ಮಾಡಿಕೊಂಡಿದೆ. ಮೊದಲ ಮಗುವಿನ ಜನ್ಮದ ಕಾರಣದಿಂದ ವೇಗಿ ಜಸ್ಪ್ರೀತ್ ಬುಮ್ರಾ ಭಾರತಕ್ಕೆ ತೆರಳಿದ ಕಾರಣ, ಅವರ ಸ್ಥಾನಕ್ಕೆ ಮೊಹಮ್ಮದ್ ಶಮಿ ಅವರನ್ನು ಆಡಿಲಾಗುತ್ತಿದೆ. ಉಳಿದಂತೆ ಪಾಕ್ ವಿರುದ್ಧ ಆಡಿದ ತಂಡವೇ ಇಂದು ಆಡುತ್ತಿದೆ.
ಎ ಗುಂಪಿನಿಂದ ಪಾಕಿಸ್ಥಾನ ಈಗಾಗಲೇ ಸೂಪರ್ 4ಗೆ ಅರ್ಹತೆ ಪಡೆದಿದೆ. ಇಂದಿನ ಪಂದ್ಯದಲ್ಲಿ ಗೆದ್ದವರು ಎರಡನೇ ತಂಡವಾಗಿ ಅರ್ಹತೆ ಪಡೆಯುತ್ತಾರೆ. ಒಂದು ವೇಳೆ ಮಳೆಯಿಂದ ರದ್ದಾದರೆ ಭಾರತ ಸೂಪರ್ 4 ಪ್ರವೇಶ ಪಡೆಯುತ್ತದೆ.
ತಂಡಗಳು
ಭಾರತ: ರೋಹಿತ್ ಶರ್ಮಾ (ನಾ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿ,ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ನೇಪಾಳ: ಕುಶಾಲ್ ಭುರ್ಟೆಲ್, ಆಸಿಫ್ ಶೇಖ್ (ವಿ.ಕೀ), ರೋಹಿತ್ ಪೌಡೆಲ್ (ನಾ), ಭೀಮ್ ಶರ್ಕಿ, ಸೋಂಪಾಲ್ ಕಮಿ, ಗುಲ್ಸನ್ ಝಾ, ದೀಪೇಂದ್ರ ಸಿಂಗ್ ಐರಿ, ಕುಶಾಲ್ ಮಲ್ಲಾ, ಸಂದೀಪ್ ಲಮಿಚಾನೆ, ಕರಣ್ ಕೆಸಿ, ಲಲಿತ್ ರಾಜಬನ್ಶಿ