ಪಲ್ಲೆಕೆಲೆ: ಏಷ್ಯಾ ಕಪ್ ಕೂಟದ ಅತ್ಯಂತ ಕುತೂಹಲಕಾರಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಶ್ರೀಲಂಕಾದ ಪಲ್ಲೆಕೆಲೆಯಲ್ಲಿ ಆರಂಭವಾಗಿದೆ. ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
ಕಳೆದ ವರ್ಷದ ಟಿ20 ವಿಶ್ವಕಪ್ ನ ಮೆಲ್ಬರ್ನ್ ಪಂದ್ಯದ ಬಳಿಕ ಇದೇ ಮೊದಲ ಬಾರಿಗೆ ಉಭಯ ತಂಡಗಳು ಮುಖಾಮುಖಿಯಾಗುತ್ತಿದೆ. ಏಷ್ಯಾಕಪ್ ಕೂಟದ ಆರಂಭಿಕ ಪಂದ್ಯದಲ್ಲಿ ಬಾಬರ್ ಅಜಮ್ ನೇತೃತ್ವದ ತಂಡ ನೇಪಾಳವನ್ನು 238 ರನ್‌ಗಳಿಂದ ಸೋಲಿಸಿ ಶುಭಾರಂಭ ಮಾಡಿದೆ.
ಹಲವು ತಿಂಗಳ ಬಳಿಕ ಮೊದಲ ಬಾರಿಗೆ ರೋಹಿತ್ ಶರ್ಮಾ ನೇತೃತ್ವದ ತಂಡವು ಪೂರ್ಣ ಸಾಮರ್ಥ್ಯದ ತಂಡವನ್ನು ಹೊಂದಿದೆ. ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಮುಂಚಿತವಾಗಿ ಭಾರತ ತಂಡವು ಬೆಂಗಳೂರಿನ ಹೊರವಲಯದ ಆಲೂರಿನಲ್ಲಿ ಶಿಬಿರ ನಡೆಸಿತ್ತು. ಸ್ಟಾರ್ ಆಟಗಾರರಾದ ಶ್ರೇಯಸ್ ಅಯ್ಯರ್ ಮತ್ತು ಜಸ್ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ್ದಾರೆ.
ಪಂದ್ಯಕ್ಕೆ ಮಳೆಯ ಭೀತಿಯಿದ್ದು, ಮಧ್ಯಾಹ್ನ ಸ್ವಲ್ಪ ಮಳೆಯಾಗಿದೆ. ಪಂದ್ಯದ ನಡುವೆ ಮಳೆಯಾಗಬಹುದು ಎಂದು ವರದಿಯಾಗಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿ.ಕೀ), ಹಾರ್ದಿಕ್ ಪಾಂಡ್ಯ (ಉ.ನಾ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಪಾಕಿಸ್ತಾನ: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾ), ಮೊಹಮ್ಮದ್ ರಿಜ್ವಾನ್ (ವಿ.ಕೀ), ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್