Advertisement

Asia cup ; ವೈಯಕ್ತಿಕ ಕಾರಣಗಳಿಂದ ಮುಂಬೈಗೆ ಹಿಂತಿರುಗಿದ ಬುಮ್ರಾ

11:41 PM Sep 03, 2023 | Team Udayavani |

ಪಲ್ಲೆಕೆಲೆ (ಶ್ರೀಲಂಕಾ): ಏಷ್ಯಾ ಕಪ್‌ ಕ್ರಿಕೆಟ್‌ ಪಂದ್ಯಾವಳಿಯ ಸೋಮವಾರ ಭಾರತ-ನೇಪಾಲ ಎದುರಾಗಲಿದ್ದು, ಈ ಪಂದ್ಯದಲ್ಲಿ ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಆಡುತ್ತಿಲ್ಲ. ಅವರು ವೈಯಕ್ತಿಕ ಕಾರಣಗಳಿಗಾಗಿ ತವರಿಗೆ ಮರಳಿದ್ದಾರೆ. ಕೆಲವೇ ದಿನಗಳಲ್ಲಿ ಏಷ್ಯಾಕಪ್‌ ಪಂದ್ಯಗಳಿಗೆ ಮರಳಲಿದ್ದಾರೆ.

Advertisement

ಸೂಪರ್ 4 ಪಂದ್ಯಗಳ ಸಮಯಕ್ಕೆ ತಂಡಕ್ಕೆ ಮರಳಲಿದ್ದಾರೆ. ಮೂಲಗಳ ಪ್ರಕಾರ, ಜಸ್ಪ್ರೀತ್ ಬುಮ್ರಾ ಮತ್ತು ಸಂಜನಾ ಗಣೇಶನ್ ತಮ್ಮ ಮೊದಲ ಮಗುವಿನ ಜನನದ ನಿರೀಕ್ಷೆಯಲ್ಲಿದ್ದಾರೆ.

ಭಾರತೀಯ ಕ್ರಿಕೆಟ್ ತಂಡದ ಪ್ರಮುಖ ವೇಗಿಯಾದ ಬುಮ್ರಾ ಅವರು ಬೆನ್ನುನೋವಿನ ಕಾರಣ ಸುದೀರ್ಘ ವಿರಾಮದ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗಮನಾರ್ಹ ಪುನರಾಗಮನ ಮಾಡಿದ್ದಾರೆ. ಅವರ ಮರಳುವಿಕೆಯನ್ನು ಕುತೂಹಲದಿಂದ ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next