ಕೊಲಂಬೊ: 19 ದಿನಗಳು, ಆರು ಸದಸ್ಯ ರಾಷ್ಟ್ರಗಳು, ಎರಡು ಸುತ್ತುಗಳು ಮುಗಿದು ಇದೀಗ ಏಷ್ಯಾ ಕಪ್ 2023 ಫೈನಲ್ ಹಂತಕ್ಕೆ ಬಂದಿದೆ. ಕೊಲಂಬೊದ ಆರ್.ಪ್ರೇಮದಾಸ್ ಸ್ಟೇಡಿಯಂನಲ್ಲಿ ಅತಿ ಹೆಚ್ಚು ಬಾರಿ ಏಷ್ಯಾ ಕಪ್ ಗೆದ್ದ ಭಾರತ ಮತ್ತು ಅತಿ ಹೆಚ್ಚು ಬಾರಿ ಫೈನಲ್ ತಲುಪಿದ ಶ್ರೀಲಂಕಾ ಇಂದಿನ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದೆ.
ಟಾಸ್ ಗೆದ್ದ ದಸುನ್ ಶನಕಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಬಾಂಗ್ಲಾ ವಿರುದ್ಧದ ಪಂದ್ಯಕ್ಕೆ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿದ್ದ ಟೀಂ ಇಂಡಿಯಾ ಇಂದು ಮತ್ತೆ ಮುಖ್ಯ ತಂಡವನ್ನೇ ಕಣಕ್ಕಿಳಿಸಿದೆ.
ಬಾಂಗ್ಲಾ ವಿರುದ್ಧ ಆಡಿರದ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್ ಮತ್ತು ಮೊಹಮ್ಮದ್ ಸಿರಾಜ್ ಫೈನಲ್ ಪಂದ್ಯದಲ್ಲಿ ಸ್ಥಾನ ಪಡೆದಿದ್ದಾರೆ. ಅವರಿಗಾಗಿ ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಪ್ರಸಿಧ್ ಕೃಷ್ಣ, ಶಾರ್ದೂಲ್ ಠಾಕೂರ್ ಸ್ಥಾನ ತೆರವು ಮಾಡಿದ್ದಾರೆ. ಅಲ್ಲದೆ ಕಳೆದ ಪಂದ್ಯದಲ್ಲಿ ಗಾಯಗೊಂಡಿದ್ದ ಅಕ್ಷರ್ ಪಟೇಲ್ ಅವರು ಹೊರಬಿದ್ದಿದ್ದಾರೆ. ಬದಲಿಗೆ ವಾಷಿಂಗ್ಟನ್ ಸುಂದರ್ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.
ಶ್ರೀಲಂಕಾ ತಂಡದಲ್ಲಿಯೂ ಬದಲಾವಣೆ ಮಾಡಿಕೊಂಡಿದ್ದು ಗಾಯಗೊಂಡಿರುವ ಸ್ಪಿನ್ನರ್ ಮಹೀಶ ತೀಕ್ಷಣ ಹೊರಗುಳಿದಿದ್ದಾರೆ. ಅವರ ಬದಲಿಗೆ ದುಶಾನ್ ಹೇಮಂತ ಸ್ಥಾನ ಪಡೆದಿದ್ದಾರೆ.
ಭಾರತ: ರೋಹಿತ್ ಶರ್ಮಾ (ನಾ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿ.ಕೀ), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್
ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಾಲ್ ಪೆರೇರಾ, ಕುಸಲ್ ಮೆಂಡಿಸ್ (ವಿ.ಕೀ), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ದಸುನ್ ಶನಕ (ಸಿ), ದುನಿತ್ ವೆಲ್ಲಲಾಗೆ, ದುಶಾನ್ ಹೇಮಂತ, ಪ್ರಮೋದ್ ಮದುಶನ್, ಮತೀಶ ಪತಿರಣ