Advertisement

Asia Cup 2023: ತಿಲಕ್ ವರ್ಮಾ ಪದಾರ್ಪಣೆ; ಟೀಂ ಇಂಡಿಯಾದಲ್ಲಿ ಐದು ಬದಲಾವಣೆ

02:38 PM Sep 15, 2023 | Team Udayavani |

ಕೊಲಂಬೊ: ಏಷ್ಯಾ ಕಪ್ ಕೂಟದ ಕೊನೆಯ ಸೂಪರ್ ಫೋರ್ ಕದನಕ್ಕೆ ಕೊಲಂಬೊದ ಆರ್.ಪ್ರೇಮದಾಸ ಸ್ಟೇಡಿಯಂ ಸಾಕ್ಷಿಯಾಗುತ್ತಿದೆ. ಫೈನಲ್ ತಲುಪಿರುವ ಭಾರತ ತಂಡ ಮತ್ತು ಫೈನಲ್ ರೇಸ್ ನಿಂದ ಹೊರಬಿದ್ದಿರುವ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗುತ್ತಿದೆ.

Advertisement

ಕೊಲಂಬೊದಲ್ಲಿ ಟಾಸ್ ಗೆದ್ದ ಮೊದಲು ಭಾರತ ಫೀಲ್ಡಿಂಗ್ ಆಯ್ಕೆ ಮಾಡಿದೆ. ಟೀಂ ಇಂಡಿಯಾದಲ್ಲಿ ಇಂದು 5 ಬದಲಾವಣೆ ಮಾಡಲಾಗಿದೆ. ಯುವ ಬ್ಯಾಟರ್ ತಿಲಕ್ ವರ್ಮಾ ಅವರು ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ.

ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ತಿಲಕ್ ವರ್ಮಾ, ಮೊಹಮ್ಮದ್ ಶಮಿ, ಪ್ರಸಿಧ್ ಕೃಷ್ಣ, ಸೂರ್ಯ ಕುಮಾರ್ ಯಾದವ್ ಮತ್ತು ಶಾರ್ದೂಲ್ ಠಾಕೂರ್ ಗೆ ಅವಕಾಶ ನೀಡಲಾಗಿದೆ.

ಬಾಂಗ್ಲಾದೇಶ ತಂಡದಲ್ಲೂ ತಂಝಿದ್ ಹಸನ್ ಅವರು ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ.

ತಂಡಗಳು

Advertisement

ಭಾರತ: ರೋಹಿತ್ ಶರ್ಮಾ (ನಾ), ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿ.ಕೀ), ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ.

ಬಾಂಗ್ಲಾದೇಶ: ಲಿಟ್ಟನ್ ದಾಸ್ (ವಿ.ಕೀ), ಅನಾಮುಲ್ ಹಕ್, ಶಕೀಬ್ ಅಲ್ ಹಸನ್ (ನಾ), ತೌಹಿದ್ ಹೃದೋಯ್, ಶಮೀಮ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಮಹೇದಿ ಹಸನ್, ನಸುಮ್ ಅಹ್ಮದ್, ತಂಝಿಮ್ ಹಸನ್ ಸಾಕಿಬ್, ಮುಸ್ತಫಿಜುರ್ ರೆಹಮಾನ್

Advertisement

Udayavani is now on Telegram. Click here to join our channel and stay updated with the latest news.

Next