ಕೊಲಂಬೊ: ಏಷ್ಯಾ ಕಪ್ ಕೂಟದ ಭಾರತ ಮತ್ತು ಪಾಕಿಸ್ತಾನ ನಡುವಿನ ಸೂಪರ್ ಫೋರ್ ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿಯಾಗಿದೆ. ಮೀಸಲು ದಿನವಾದ ಸೋಮವಾರವೂ ಮಳೆ ಮುಂದುವರಿದಿದ್ದು, ಪಂದ್ಯ ಆರಂಭ ವಿಳಂಬವಾಗಿದೆ.
ಕೊಲಂಬೊದ ಆರ್.ಪ್ರೇಮದಾಸ ಸ್ಟೇಡಿಯಂನಲ್ಲಿ ರವಿವಾರ ಭಾರತ ಮತ್ತು ಪಾಕ್ ನಡುವಿನ ಪಂದ್ಯ ಅರಂಭವಾಗಿತ್ತು. ಆದರೆ 24 ಓವರ್ ಮುಗಿಯುತ್ತಿದ್ದಂತೆ ಆರಂಭವಾದ ಮಳೆ ನಿಲ್ಲದ ಕಾರಣ ಪಂದ್ಯವನ್ನು ಮೀಸಲು ದಿನವಾದ ಇಂದಿಗೆ ಮುಂದೂಡಲಾಗಿತ್ತು.
ಮೊದಲ ದಿನದಲ್ಲಿ ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಭಾರತ ತಂಡವು 24.1 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿದೆ. ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ತಲಾ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಗಿಲ್ 58 ರನ್ ಮಾಡಿದರೆ, ರೋಹಿತ್ 56 ರನ್ ಗಳಿಸಿ ಔಟಾಗಿದ್ದಾರೆ. ಸದ್ಯ ಎಂಟು ರನ್ ಗಳಿಸಿದ ವಿರಾಟ್ ಕೊಹ್ಲಿ ಮತ್ತು 17 ರನ್ ಗಳಿಸಿರುವ ಕೆಎಲ್ ರಾಹುಲ್ ವಿಕೆಟ್ ಕಾಯ್ದುಕೊಂಡಿದ್ದಾರೆ.
ಇದನ್ನೂ ಓದಿ:Poisonous Snake: ಸನಾತನ ಧರ್ಮದ ಬಳಿಕ ಉದಯನಿಧಿ ಸ್ಟಾಲಿನ್ ಮತ್ತೊಂದು ವಿವಾದಾತ್ಮಕ ಹೇಳಿಕೆ
ಇಂದು ರವಿವಾರ ಸ್ಥಗಿತವಾದಲ್ಲಿಂದಲೇ ಪಂದ್ಯ ಮತ್ತೆ ಆರಂಭವಾಗಲಿದೆ. ಒಂದು ವೇಳೆ ಮಳೆ ಬಂದು ಪಂದ್ಯ ರದ್ದಾದರೆ ಉಭಯ ತಂಡಗಳಿಗೂ ತಲಾ ಒಂದಂಕ ಸಿಗಲಿದೆ.