ನವದೆಹಲಿ:ಉತ್ತರಾಖಂಡ್ ಕಾಂಗ್ರೆಸ್ ನ ಮಾಜಿ ರಾಜ್ಯಾಧ್ಯಕ್ಷ ಕಿಶೋರ್ ಉಪಾಧ್ಯಾಯ ಗುರುವಾರ (ಜನವರಿ 27) ಪಕ್ಷಕ್ಕೆ ರಾಜೀನಾಮೆ ನೀಡಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಇದನ್ನೂ ಓದಿ:ಸುಳ್ಯ: ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆ
ಕಾಂಗ್ರೆಸ್ ಪಕ್ಷದೊಳಗೆ ಪಕ್ಷ ವಿರೋಧಿ ಚಟುವಟಿಕೆಗಳು ನಡೆಯುತ್ತಿದೆ ಎಂದು ಪಕ್ಷ ಆರೋಪಿಸಿದ್ದು, ಈ ಹಿನ್ನೆಲೆಯಲ್ಲಿ ಕಿಶೋರ್ ಉಪಾಧ್ಯಾಯ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಅಮಾನತುಗೊಳಿಸಿತ್ತು.
ಉತ್ತರಾಖಂಡದಲ್ಲಿ ಭಾರತೀಯ ಜನತಾ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿರುವುದಾಗಿ ತಿಳಿಸಿರುವ ಉಪಾಧ್ಯಾಯ, ನಾನು ಕಾಂಗ್ರೆಸ್ ಪಕ್ಷವನ್ನು ಯಾಕೆ ಬಿಟ್ಟೆ ಅಂತ ಕಾಂಗ್ರೆಸ್ ಮುಖಂಡರ ಬಳಿ ನೀವು ಕೇಳಬೇಕು ಎಂದು ತಿಳಿಸಿದ್ದಾರೆ.
ಬಿಜೆಪಿ ಹಾಗೂ ಇತರ ರಾಜಕೀಯ ಪಕ್ಷಗಳ ಜತೆ ಹೆಚ್ಚಾಗಿ ಕಾಣಿಸಿಕೊಳ್ಳುವ ಮೂಲಕ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದರಿಂದ ಉಪಾಧ್ಯಾಯ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದ ವಜಾಗೊಳಿಸಲಾಗಿದೆ ಎಂದು ಉತ್ತರಾಖಂಡ್ ಕಾಂಗ್ರೆಸ್ ನ ಪ್ರಭಾರ ಉಸ್ತುವಾರಿ ದೇವೇಂದ್ರ ಯಾದವ್ ಪತ್ರದಲ್ಲಿ ತಿಳಿಸಿದ್ದಾರೆ.
ಕಿಶೋರ್ ಉಪಾಧ್ಯಾಯ ಉತ್ತರಾಖಂಡ್ ನಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ 2014ರಿಂದ 2017ರವರೆಗೆ ಕಾರ್ಯನಿರ್ವಹಿಸಿದ್ದರು. ಅಲ್ಲದೇ 2002 ಮತ್ತು 2007ರಲ್ಲಿ ತೆಹ್ರಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.