Advertisement

ಬಿಜೆಪಿಯ ಟಿಕೆಟ್ ಕೇಳಿದ್ದೇವೆ, ಕೊಡದಿದ್ದರೆ ಪಕ್ಷೇತರವಾಗಿ ಸ್ಪರ್ಧೆ: ಮುತಾಲಿಕ್

02:50 PM Dec 21, 2022 | Team Udayavani |

ಮೈಸೂರು : ”ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನನ್ನ ಸ್ಪರ್ಧೆ ನಿಶ್ಚಿತ. ರಾಜ್ಯದ ಐದು ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡಿದ್ದೇನೆ.ಬಿಜೆಪಿ ಟಿಕೆಟ್ ಕೇಳಿದ್ದೇವೆ, ಒಂದು ವೇಳೆ ಕೊಡದಿದ್ದರೆ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ” ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ.

Advertisement

ಸುದ್ದಿಗಾರೊಂದಿಗೆ ಮಾತನಾಡಿದ ಅವರು ”ಜಮಖಂಡಿ, ತೇರದಾಳ, ಬಾಗಲಕೋಟೆ, ಧಾರವಾಡ ನಗರ, ಶೃಂಗೇರಿ, ಕಾರ್ಕಳ ಈ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡಿದ್ದೇನೆ.ಈ ಪೈಕಿ ಒಂದನ್ನು ಈ ತಿಂಗಳ ಅಂತ್ಯಕ್ಕೆ ಪ್ರಕಟಿಸುತ್ತೇನೆ. ಪಕ್ಷೇತರವಾಗಿ ಸ್ಪರ್ಧಿಸಿದರೂ ಹಿಂದುತ್ವದ ಅಜೆಂಡಾದ ಮೂಲಕ ಗೆದ್ದು ಬರುತ್ತೇನೆ. ಬಿಜೆಪಿಯಿಂದ 25 ಟಿಕೆಟ್ ಕೇಳಿದ್ದೇವೆ.ಈ ಪೈಕಿ ಐವರು ಸ್ವಾಮೀಜಿಗಳಿಗೂ ಟಿಕೆಟ್ ನೀಡುವಂತೆ ಕೇಳಿದ್ದೇವೆ.ಒಂದು ವೇಳೆ ಕೊಡದಿದ್ದರೂ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇವೆ” ಎಂದರು.

”ಎಸ್ಸಿ ಎಸ್ಟಿ ಮೀಸಲಾತಿ, ಮಹಿಳಾ ಮೀಸಲಾತಿ ಹಾಗೂ ಪದವೀಧರರಿಗೆ ಮೀಸಲಾತಿಯಂತೆ ಬಿಜೆಪಿಯಲ್ಲಿ ಹಿಂದುಗಳಿಗೂ ಮೀಸಲಾತಿ ನೀಡಬೇಕು” ಎಂದು ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ.

”ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ವಿಚಾರ ಸುಪ್ರೀಂ ಕೋರ್ಟಿನಲ್ಲಿದೆ.ಹೀಗಿರುವಾಗ ಗಡಿ ವಿವಾದದ ಬಗ್ಗೆ ಮಾತನಾಡುವುದು ನ್ಯಾಯಾಂಗ ನಿಂದನೆ ಆಗುತ್ತದೆ. ಯಾರು ಬೇಕಾದರೂ ನ್ಯಾಯಾಂಗ ನಿಂದನೆ ಕೇಸ್ ಹಾಕಲು ಅವಕಾಶ ಇದೆ. ನಾನು ಕೂಡ ವಕೀಲರೊಂದಿಗೆ ಚರ್ಚೆ ಮಾಡುತ್ತೇನೆ. ಮಹಾರಾಷ್ಟ್ರ ಕಾಂಗ್ರೆಸ್, ಬಿಜೆಪಿಯವರು ಬೆಳಗಾವಿ ನಮ್ಮದು ಅಂತಾರೆ. ಕರ್ನಾಟಕದಲ್ಲಿ ಕಾಂಗ್ರೆಸ್, ಬಿಜೆಪಿಯವರು ಬೆಳಗಾವಿ ನಮ್ಮದು ಅಂತಾರೆ. ಇವರ ವಿರುದ್ಧ ಸುಪ್ರೀಂ ಕೋರ್ಟ್ ಸುಮೋಟೋ ಕೇಸ್ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಮಹಾಜನ್ ವರದಿ ಪ್ರಕಾರ ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಅಂತ ಎಲ್ಲರಗೂ ಗೊತ್ತಿರುವ ವಿಚಾರ” ಎಂದರು.

Advertisement

Udayavani is now on Telegram. Click here to join our channel and stay updated with the latest news.

Next