ನವದೆಹಲಿ:ಕೋವಿಡ್ 19 ಸೋಂಕು ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಅಸ್ಸಾಂ ಸರ್ಕಾರ ರದ್ದುಗೊಳಿಸಿರುವುದಾಗಿ ಘೋಷಿಸಿದೆ. 10 ಮತ್ತು 12ನೇ ತರಗತಿಯ ಫಲಿತಾಂಶವನ್ನು ಜುಲೈ 31ರೊಳಗೆ ಪ್ರಕಟಿಸಲಾಗುವುದು ಎಂದು ಅಸ್ಸಾಂ ಶಿಕ್ಷಣ ಸಚಿವ ರಾನೋಜ್ ಪೆಗು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಇದನ್ನೂ ಓದಿ:ರಾಜೀನಾಮೆ ನೀಡದೆ ಬಿಜೆಪಿಗೆ ಸೇರಿರುವ 10 ಶಾಸಕರನ್ನ ಪಕ್ಷಕ್ಕೆ ಸೇರಿಸಲ್ಲ : ಗುಂಡೂರಾವ್
ಹತ್ತು ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಬಗ್ಗೆ ಸೂತ್ರವನ್ನು ನಿರ್ಧರಿಸಲು ಎರಡು ಸಮಿತಿಗಳನ್ನು ರಚಿಸಲಾಗುವುದು ಎಂದು ಪೆಗು ತಿಳಿಸಿದ್ದಾರೆ.
ಕೋವಿಡ್ ಪಾಸಿಟಿವಿಟಿ ದರವನ್ನು ನಿಯಂತ್ರಣಕ್ಕೆ ತರಬೇಕಾದ ಅಗತ್ಯವಿದ್ದು, ಕೋವಿಡ್ ಪರಿಸ್ಥಿತಿಯನ್ನು ಇನ್ನಷ್ಟೇ ನಿಯಂತ್ರಣಕ್ಕೆ ತರಬೇಕಾಗಿದೆ. ಈ ನಿಟ್ಟಿನಲ್ಲಿ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಎಂದು ಪೆಗು ಹೇಳಿದರು.
ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆರೋಗ್ಯ ಮತ್ತು ಶಿಕ್ಷಣ ಇಲಾಖೆಗಳ ಅಧಿಕಾರಿಗಳು, ಎಸ್ ಇಬಿಎ, ಎಎಚ್ ಎಸ್ ಇಸಿ, ಆಲ್ ಅಸ್ಸಾಂ ಸ್ಟೂಡೆಂಟ್ಸ್, ಆಲ್ ಬೋಡೋ ಸ್ಟೂಡೆಂಟ್ಸ್ ಯೂನಿಯನ್ ಹಾಗೂ ಇತರರು ಭಾಗವಹಿಸಿದ್ದರು.