Advertisement

“ತುಳು ಪುರ್ಪ” ಕವನ ಸಂಕಲನಕ್ಕೆ ಅಸ್ಸಾಂ ಮುಖ್ಯಮಂತ್ರಿ ಮೆಚ್ಚುಗೆ

01:10 AM Aug 12, 2023 | Team Udayavani |

ಕಾಪು: ಜೈ ತುಳುನಾಡ್‌ ಸಂಘಟನೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭ ಪ್ರಕಟಿಸಿದ್ದ ಕವನ ಸಂಕಲನ “ತುಳು ಪುರ್ಪ’ವನ್ನು ಶ್ಲಾಘಿಸಿ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಸಂಘಟನೆ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

Advertisement

ತುಳು ಭಾಷೆಯ ಸೊಗಡನ್ನು ದೇಶಕ್ಕೆ ಪರಿಚಯಿಸುವ ಹಾಗೂ ಭಾಷೆಗೆ ಸಾಂವಿಧಾನಿಕ ಮಾನ್ಯತೆಯನ್ನು ಬಯಸುವ ಈ ಕೃತಿಯನ್ನು ಪ್ರಧಾನಿ, ರಾಷ್ಟ್ರಪತಿ ಹಾಗೂ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕಳುಹಿಸಿ ಕೊಡಲಾಗಿತ್ತು. ಅಸ್ಸಾಂ ಮುಖ್ಯಮಂತ್ರಿಗಳಿಂದ ಪ್ರತಿಕ್ರಿಯೆ ಬಂದಿದ್ದು, “ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತದಲ್ಲಿ ಹಲವು ಭಾಷೆಗಳಿವೆ. ಪಂಚ ಮಹಾ ದ್ರಾವಿಡ ಭಾಷೆಗಳಲ್ಲಿ ತುಳು ಭಾಷೆಯೂ ಒಂದಾಗಿದೆ. ನಮ್ಮ ಏಕತೆಯನ್ನು ಸದೃಢಗೊಳಿಸುವಲ್ಲಿ ಭಾಷೆಗಳು ಆಧಾರ ಸ್ತಂಭಗಳಾಗಿವೆ. ತುಳು ಭಾಷೆಗೆ ಮಾನ್ಯತೆ ದೊರೆಯಬೇಕು. ಈ ನಿಟ್ಟಿನಲ್ಲಿ ಜೈ ತುಳುನಾಡ್‌ ಕಾರ್ಯ ಶ್ಲಾಘನೀಯ’ ಎಂದು ಬಣ್ಣಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next