Advertisement

Assam: ಅವಹೇಳನಕಾರಿ ಹೇಳಿಕೆ… ಅಸ್ಸಾಂನ ಕಾಂಗ್ರೆಸ್ ಶಾಸಕ ಅಫ್ತಾಬುದ್ದೀನ್ ಮೊಲ್ಲಾ ಬಂಧನ

10:27 AM Nov 08, 2023 | Team Udayavani |

ದಿಸ್ಪುರ: ಪುರೋಹಿತರು, ಅರ್ಚಕರು ಮತ್ತು ಸಂತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಅಫ್ತಾಬುದ್ದೀನ್ ಮೊಲ್ಲಾ ಅವರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.

Advertisement

ಮೊಲ್ಲಾ ವಿರುದ್ಧ ಡಿಸ್‌ಪುರ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 295(ಎ)/ 153ಎ(1)(ಬಿ)/505(2) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿಜಿಪಿ ಜಿಪಿ ಸಿಂಗ್ ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಕಾಂಗ್ರೆಸ್ ನಾಯಕ ಅಫ್ತಾಬುದ್ದೀನ್ ಮೊಲ್ಲಾ ಅವರು ಜಲೇಶ್ವರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ ಎನ್ನಲಾಗಿದೆ.

ನವೆಂಬರ್ 4 ರಂದು ಗೋಲ್ಪಾರಾ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮೊಲ್ಲಾ ಅವರು ಪುರೋಹಿತರು, ದೇವಳದ ಅರ್ಚಕರು ಮತ್ತು ಧರ್ಮದರ್ಶಿಗಳನ್ನು ಗುರಿಯಾಗಿಸಿಕೊಂಡು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿ ದಿಸ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದನ್ನೂಓದಿ: Rain: ಕೆಳ ಸೇತುವೆಯಲ್ಲೇ ವಾಹನ ಬಿಟ್ಟು ಪ್ರಾಣ ಉಳಿಸಿಕೊಂಡ ಸವಾರರು

Advertisement
Advertisement

Udayavani is now on Telegram. Click here to join our channel and stay updated with the latest news.

Next