Advertisement

ಪ್ರವಾಹ ಪೀಡಿತ ಈಶಾನ್ಯ ರಾಜ್ಯಗಳಿಗೆ 2,350 ಕೋಟಿ 

07:35 AM Aug 02, 2017 | Team Udayavani |

ಗುವಾಹಟಿ: ಪ್ರವಾಹ ಪೀಡಿತ ಅಸ್ಸಾಂಗೆ ಮಂಗಳವಾರ ಪ್ರಧಾನಿ ಮೋದಿ ಅವರು ಭೇಟಿ ನೀಡಿದ್ದು, ಅಲ್ಲಿನ ಪರಿಸ್ಥಿತಿ ಪರಿಶೀಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಪ್ರವಾಹದಿಂದ ತತ್ತರಿಸಿರುವ ಈಶಾನ್ಯ ರಾಜ್ಯಗಳಿಗೆ 2,350 ಕೋಟಿ ರೂ.ಗಳ ಪ್ಯಾಕೇಜ್‌ ಘೋಷಿಸಿದ್ದಾರೆ.

Advertisement

ಜತೆಗೆ, ಅಸ್ಸಾಂಗೆ ತತ್‌ಕ್ಷಣದ ಪರಿಹಾರವಾಗಿ 250 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದಾರೆ. ಜೂನ್‌ನಲ್ಲಿ ಪ್ರವಾಹ ಪರಿಹಾರವೆಂದು ಈ ರಾಜ್ಯಕ್ಕೆ 300 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಮಂಗಳವಾರ ಅರುಣಾಚಲ ಪ್ರದೇಶ, ನಾಗಾಲ್ಯಾಂಡ್‌, ಮಣಿಪುರ, ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಸುದೀರ್ಘ‌ ಚರ್ಚೆ ನಡೆಸಿದ ಬಳಿಕ ಈ ಘೋಷಣೆ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next