ಅಸ್ಸಾಂ: ಹಿಂಸಾಚಾರ ಪೀಡಿತ ಮಣಿಪುರದಿಂದ ಮತ್ತೊಮ್ಮೆ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಅಸ್ಸಾಂ ರೈಫಲ್ಸ್ (ಎಆರ್) ಯೋಧನೊಬ್ಬ ತನ್ನ ಸಹಚರರ ಮೇಲೆ ಮನಬಂದಂತೆ ಗುಂಡು ಹಾರಿಸಿ ನಂತರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಗುಂಡಿನ ದಾಳಿಯಲ್ಲಿ ಆರು ಅಸ್ಸಾಂ ರೈಫಲ್ಸ್ ಯೋಧರು ಗಾಯಗೊಂಡಿದ್ದು ಅವರನ್ನು ಚುರಾಚಂದ್‌ಪುರದ ಸೇನಾ ಆಸ್ಪತ್ರೆಗೆ ದಾಖಲಿಸಿಯಲಾಗಿದೆ.
ಎಆರ್ ಬೆಟಾಲಿಯನ್ ಆವರಣದಲ್ಲಿ ಈ ಘಟನೆ ನಡೆದಿದ್ದು, ದಾಳಿ ನಡೆಸಿದ ಯೋಧ ಹಿಂಸಾಚಾರ ಪೀಡಿತ ಮಣಿಪುರದ ಚುರಾಚಂದಪುರ ನಿವಾಸಿ ಎಂದು ಹೇಳಲಾಗಿದೆ. ವರದಿಯ ಪ್ರಕಾರ, ದಾಳಿ ನಡೆಸಿದ ಯೋಧ ಕುಕಿ ಸಮುದಾಯಕ್ಕೆ ಸೇರಿದವನು ಎನ್ನಲಾಗಿದೆ.
ಸದ್ಯಕ್ಕೆ ಗುಂಡಿನ ದಾಳಿಯ ಹಿಂದಿನ ಉದ್ದೇಶ ಸ್ಪಷ್ಟವಾಗಿಲ್ಲ. ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷಕ್ಕೂ ದುರದೃಷ್ಟಕರ ಘಟನೆಗೂ ಸಂಬಂಧ ಕಲ್ಪಿಸಬಾರದು ಎಂದು ಅಸ್ಸಾಂ ರೈಫಲ್ಸ್ ಹೇಳಿಕೆ ನೀಡಿದೆ.
ಅಸ್ಸಾಂ ರೈಫಲ್ಸ್‌ನ ಎಲ್ಲಾ ಬೆಟಾಲಿಯನ್‌ಗಳು ಮಣಿಪುರದ ವಿವಿಧ ಸಮುದಾಯಗಳಿಗೆ ಸೇರಿದವರಾಗಿದ್ದಾರೆ ಎಂದು ಹೇಳಲಾಗಿದೆ. ತನಿಖೆ ಬಳಿಕ ಗುಂಡಿನ ದಾಳಿಗೆ ನಿಖರ ಕಾರಣ ತಿಳಿದು ಬರಬೇಕಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ: Bank Loan Fraud Case: ವಾಧವನ್ ಸಹೋದರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್