Advertisement
ಶುಕ್ರವಾರ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಇದನ್ನು ಅನುಮೋದಿಸಲಾಗಿದೆ. ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕಡೆಗೆ ಇದೊಂದು ದೊಡ್ಡ ಹೆಜ್ಜೆ ಎಂದು ಸಂಪುಟ ಸಚಿವ ಜಯಂತ್ ಬರುವಾ ಹೇಳಿದ್ದಾರೆ. ಅಸ್ಸಾಂನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡುವುದಾಗಿ ನಮ್ಮ ಮುಖ್ಯಮಂತ್ರಿ ಈಗಾಗಲೇ ಘೋಷಿಸಿದ್ದರು. ಅದರ ಮೊದಲ ಭಾಗವಾಗಿ ಇಂದು ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆಯನ್ನು ರದ್ದುಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದರು.
ಮಧ್ಯರಾತ್ರಿಯ ನಂತರ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸಾಮಾಜಿಕ ಮಾಧ್ಯಮದಲ್ಲಿ ಮಾಡಿರುವ ಪೋಸ್ಟ್ ನಲ್ಲಿ, “ಫೆಬ್ರವರಿ 23 ರಂದು, ಅಸ್ಸಾಂ ಕ್ಯಾಬಿನೆಟ್ ಹಳೆಯ ಅಸ್ಸಾಂ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆಯನ್ನು ರದ್ದುಗೊಳಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿತು. ಕಾನೂನಿನ ಪ್ರಕಾರ ವಧು ಮತ್ತು ವರರು 18 ಮತ್ತು 21 ರ ಕಾನೂನುಬದ್ಧ ವಯಸ್ಸನ್ನು ತಲುಪದಿದ್ದರೂ ಸಹ ವಿವಾಹ ನೋಂದಣಿಗೆ ಅವಕಾಶ ನೀಡುವ ನಿಬಂಧನೆಗಳನ್ನು ಈ ಹಿಂದಿನ ಕಾಯಿದೆ ಒಳಗೊಂಡಿತ್ತು. ಹಾಗಾಗಿ ಅಸ್ಸಾಂನಲ್ಲಿ ಬಾಲ್ಯ ವಿವಾಹ ಪದ್ದತಿಯನ್ನು ನಿಷೇಧಿಸುವ ನಿಟ್ಟಿನಲ್ಲಿ ನಾವು ಇಟ್ಟಿರುವ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ ಎಂದರು. ಈ ಬಗ್ಗೆ ಮಾಹಿತಿ ನೀಡಿದ ಸಚಿವ ಜಯಂತ್ ಮಲ್ಲಬರುವಾ, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ರಿಜಿಸ್ಟ್ರಾರ್‌ಗಳು ಈಗ ಹೊಸದಾಗಿ ರಚನೆಯಾದ ಕಾನೂನಿನ ಅಡಿಯಲ್ಲಿ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳನ್ನು ನೋಂದಾಯಿಸುವ ಉಸ್ತುವಾರಿಯನ್ನು ವಹಿಸುತ್ತಾರೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ರದ್ದಾದ ಕಾಯಿದೆಯಡಿ ಕಾರ್ಯನಿರ್ವಹಿಸುತ್ತಿದ್ದ 94 ಮುಸ್ಲಿಂ ರಿಜಿಸ್ಟ್ರಾರ್‌ಗಳನ್ನು ಸಹ ಅವರ ಹುದ್ದೆಯಿಂದ ಬಿಡುಗಡೆ ಮಾಡಲಾಗುವುದು ಮತ್ತು ಅವರಿಗೆ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ. 1935 ರ ಹಳೆಯ ಕಾಯಿದೆಯಿಂದ ಹದಿಹರೆಯದವರ ವಿವಾಹವನ್ನು ನಿಷೇಧಿಸುವ ನಿಟ್ಟಿನಲ್ಲಿ ಸಹಾಯವಾಗಲಿದೆ. ಈ ಕಾನೂನು ಬ್ರಿಟಿಷ್ ಸಾಮ್ರಾಜ್ಯದಿಂದ ಜಾರಿಗೆ ಬಂದಿತು. 18 ವರ್ಷದೊಳಗಿನ ಹೆಣ್ಣು ಮತ್ತು 21 ವರ್ಷದೊಳಗಿನ ವ್ಯಕ್ತಿ ವಿವಾಹವಾಗಬಹುದು ಎಂದು ವ್ಯಾಖ್ಯಾನಿಸಲಾಗಿರುವ ಈ ಕಾಯ್ದೆಯನ್ನು ರದ್ದುಪಡಿಸುವ ಮೂಲಕ ಬಾಲ್ಯ ವಿವಾಹದ ಸಮಸ್ಯೆಯನ್ನು ಪರಿಹರಿಸಲು ನಮ್ಮ ಸರ್ಕಾರ ಬಯಸುತ್ತದೆ ಎಂದು ಹೇಳಿದರು.
Related Articles
Advertisement