ನಾಗಾಂವ್: ಲೇಡಿ ಸಿಂಗಂ ಖ್ಯಾತಿ ಗಳಿಸಿದ್ದ ಅಸ್ಸಾಂನ ಮಹಿಳಾ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ನಾಗಾವ್ ಜಿಲ್ಲೆಯಲ್ಲಿ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಕಂಟೈನರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತ ಸಂಭವಿಸಿದ ವೇಳೆ ಜುನ್ಮೋನಿ ರಾಭಾ ತನ್ನ ಖಾಸಗಿ ಕಾರಿನಲ್ಲಿ ಏಕಾಂಗಿಯಾಗಿದ್ದರು ಮತ್ತು ಪೊಲೀಸ್ ಸಮವಸ್ತ್ರದಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.
ಜುನ್ಮೋನಿ ರಾಭಾ ಅವರು ಬಾಲಿವುಡ್ ಸಿನಿಮಾಗಳ ನಂತರ ಲೇಡಿ ಸಿಂಗಂ, ದಬಾಂಗ್ ಕಾಪ್ ಎಂದು ಜನಪ್ರಿಯತೆ ಗಳಿಸಿದ್ದರು. ಜೊತೆಗೆ ವಿವಾದಗಳ ಕಾರಣಕ್ಕೂ ಸುದ್ದಿಯಾಗಿದ್ದರು.
Related Articles
ಅಪಘಾತದ ನಂತರ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಕಂಟೈನರ್ ಟ್ರಕ್ ವಶಪಡಿಸಿಕೊಂಡಿರುವ ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.