Advertisement

Bantwal ಮನೆಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ; ಪ್ರಕರಣ ದಾಖಲು

09:02 PM Sep 13, 2023 | Team Udayavani |

ಬಂಟ್ವಾಳ: ಮನೆಯ ವಿಸ್ತರಣೆಯ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆರೋಪಿಗಳ ತಂಡವೊಂದು ಅಕ್ರಮವಾಗಿ ಪ್ರವೇಶ ಮಾಡಿ ಮನೆ ಮಂದಿಗೆ ಹಲ್ಲೆ ನಡೆಸಿದ ಘಟನೆ ಸೆ. 10ರಂದು ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಆರೋಪಿಗಳಾದ ಜಯಕರ, ಉಮೇಶ, ದಾಮು, ಯಶೋದಾ, ವಿಮಲಾ ಅವರು ಹಲ್ಲೆ ಮಾಡಿದ್ದು, ಮನೆಗೆ ಅಕ್ರಮ ಪ್ರವೇಶ ಮಾಡಿ ಸಾಮಗ್ರಿಗಳನ್ನು ಎಸೆದಿದ್ದಾರೆ. ಆರೋಪಿ ಉಮೇಶನು ಅನುಚಿತವಾಗಿ ವರ್ತಿಸಿ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next