ಬೆಂಗಳೂರು: ನಾಲ್ಕೂವರೆ ವರ್ಷದ ತನ್ನ ಮಗಳ ಮೇಲೆ ತಂದೆಯೇ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಈ ಸಂಬಂಧ ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಭೈರತಿ ನಿವಾಸಿ ಅಮರೇಶ್ ಎಂಬಾತನ ವಿರುದ್ಧ ರಾಮಮೂರ್ತಿನಗರ ಠಾಣೆ ಪೊಲೀಸರು ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.
ಆರೋಪಿ ಮತ್ತು ಆತನ ಪತ್ನಿ ನಡುವೆ ಕೌಟುಂಬಿಕ ಕೇಸ್ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ಮಧ್ಯೆ ಕೋರ್ಟ್ ಸೂಚನೆ ಮೇರೆಗೆ ದೂರುದಾರ ಮಹಿಳೆ ತನ್ನ ಇಬ್ಬರು ಮಕ್ಕಳನ್ನು ಪ್ರತಿ ಭಾನುವಾರ ಪತಿ ಮನೆಗೆ ಕಳುಹಿಸುತ್ತಿದ್ದರು. ಅದೇ ರೀತಿ ಭಾನುವಾರ ಬೆಳಗ್ಗೆ 11 ಗಂಟೆಗೆ ಇಬ್ಬರು ಮಕ್ಕಳನ್ನು ಬಿಟ್ಟು ಮಧ್ಯಾಹ್ನ 2 ಗಂಟೆಯ ಸಮ ಯದಲ್ಲಿ ವಾಪಸ್ ಕರೆದುಕೊಂಡು ಬರಲು ಹೋಗಿದ್ದಾರೆ. ಆಗ ನಾಲ್ಕೂವರೆ ವರ್ಷದ ಮಗಳು ಅಳುತ್ತಿದ್ದಳು. ಆಗ ಖಾಸಗಿ ಆಸ್ಪತ್ರೆಗೆ ಮಗಳನ್ನು ಕರೆದುಕೊಂಡು ಪರೀಕ್ಷಿಸಿದ್ದಾಗ ಲೈಂಗಿಕ ದೌರ್ಜನ್ಯ ಎಸಗಿರು ವುದನ್ನು ವೈದ್ಯರು ದೃಢಪಡಿಸಿದ್ದಾರೆ.
ಹೀಗಾಗಿ ಪತಿ ವಿರುದ್ಧ ಸಂತ್ರಸ್ತೆ ತಾಯಿ ದೂರು ನೀಡಿದ್ದಾರೆ.