ದಾವಣಗೆರೆ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರ ಆಪ್ತ ಸಹಾಯಕನ ಮೇಲೆ ಹಲ್ಲೆ ನಡೆದ ಘಟನೆ ಸೋಮವಾರ ರಾತ್ರಿ ಹೊನ್ನಾಳಿಯಲ್ಲಿ ನಡೆದಿದೆ.
ರೇಣುಕಾಚಾರ್ಯ ಅವರ ಆಪ್ತ ಸಹಾಯಕ ಪ್ರಜ್ವಲ್ ಎಂಬುವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಗಾಯಗೊಂಡಿರುವ ಪ್ರಜ್ವಲ್ ಅವರನ್ನು ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಮಾಡಿದವರು, ಕಾರಣದ ಬಗ್ಗೆ ತಿಳಿದು ಬಂದಿಲ್ಲ.
ಇದನ್ನೂ ಓದಿ:ದಾದಾಗಿರಿ ಅಂತ್ಯ: ಬಿಸಿಸಿಐ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ನೇಮಕ
ಕೆಲ ದಿನಗಳ ಹಿಂದೆ ಹೊನ್ನಾಳಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಗಲಾಟೆ ನಡೆದಿತ್ತು. ಆ ಹಿನ್ನೆಲೆಯಲ್ಲಿ ಏನಾದರೂ ಹಲ್ಲೆ ನಡೆದಿರಬಹುದು ಎನ್ನಲಾಗಿದೆ.
ಎಂ.ಪಿ. ರೇಣುಕಾಚಾರ್ಯ ಆಸ್ಪತ್ರೆಗೆ ಭೇಟಿ ನೀಡಿ ಪ್ರಜ್ವಲ್ ಆರೋಗ್ಯ ವಿಚಾರಿಸಿದರು. ಹಲ್ಲೆ ಮಾಡಿದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದರು.