Advertisement

ಸಾರ್ವಜನಿಕ ಸ್ಥಳದಲ್ಲಿ ನಗರಸಭೆ ಕಾರ್ಮಿಕನ ಮೇಲೆ ಹಲ್ಲೆ: ಆರೋಪಿಗಳಿಬ್ಬರ ಬಂಧನ

10:41 PM Mar 12, 2021 | Team Udayavani |

ಉಡುಪಿ: ಕಸದ ವಿಚಾರವಾಗಿ ನಗರಸಭೆಯ ಕಸ ಸಂಗ್ರಹ ಮಾಡುವ ಕಾರ್ಮಿಕರೊಬ್ಬರ ಮೇಲೆ ಅಂಗಡಿಯವರು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಗರದ ಸಿಟಿ ಬಸ್‌ ನಿಲ್ದಾಣದ ಬಳಿ ನಡೆದಿದೆ. ಪ್ರಕರಣ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

Advertisement

ಹಲ್ಲೆಗೊಳಗಾದ ಕಾರ್ಮಿಕ ಬಾಗಲಕೋಟೆ ಮೂಲದ ನಿಟ್ಟೂರು ನಿವಾಸಿ ಸಂಜು ಮಾದರ(26). ಹಲ್ಲೆ ನಡೆಸಿದ ಆರೋಪಿಗಳಾದ ನೇಜಾರಿನ ಇಸ್ಮಾಯಿಲ್‌(55) ಹಾಗೂ ಹೂಡೆಯ ಸೊಹೇಲ್‌(28) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ವಿವರ:
ಸಂಜು ಸಿಟಿ ಬಸ್‌ ನಿಲ್ದಾಣದ ಬಳಿ ಕಸ ಸಂಗ್ರಹಕ್ಕೆ ವಾಹನದೊಂದಿಗೆ ಹೋಗಿದ್ದಾರೆ. ಆಗ ಆರೋಪಿಗಳ ಅಂಗಡಿಯಲ್ಲಿ ಹಸಿ ಮತ್ತು ಒಣ ಕಸ ಬೆರೆಸಿರುವುದನ್ನು ಸಂಜು ಪ್ರಶ್ನಿಸಿದ್ದಾರೆ. ಈ ವಿಚಾರವಾಗಿ ಅಂಗಡಿಯವರಿಗೆ ಮತ್ತು ಸಂಜು ಮಧ್ಯೆ ವಾಗ್ವಾದ ನಡೆಯುತ್ತಿರುವ ಸಂದರ್ಭ ಸಿಟ್ಟಿಗೆದ್ದ ಇಸ್ಮಾಯಿಲ್‌ ಮತ್ತು ಸೊಹೇಲ್‌, ಸಂಜುವಿಗೆ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವುದಾಗಿ ದೂರಲಾಗಿದೆ. ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಶಾಸಕ ರಘುಪತಿ ಭಟ್‌, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಒತ್ತಾಯಿಸಿದ್ದಾರೆ.

ಇದನ್ನೂ ಓದಿ :ಹೋಟೆಲ್ ಸಿಬ್ಬಂದಿಗೆ 15 ದಿನಕ್ಕೊಮ್ಮೆ ಕಡ್ಡಾಯ ಸೋಂಕು ಪರೀಕ್ಷೆ

Advertisement

Udayavani is now on Telegram. Click here to join our channel and stay updated with the latest news.

Next