ನವದೆಹಲಿ: ದೇಶಾದ್ಯಂತ ಕೋವಿಡ್ ಆತಂಕದ ನಡುವೆಯೂ ನಡೆದಿದ್ದ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಮೇ 2ರಂದು ಪ್ರಕಟವಾಗಲಿದ್ದು, ಈ ಹಿನ್ನೆಲೆಯಲ್ಲಿ ಮತಗಟ್ಟೆ ಸಮೀಕ್ಷೆ ಗುರುವಾರ(ಏಪ್ರಿಲ್ 29)ಹೊರಬಿದ್ದಿದ್ದು ಹಲವು ಅಚ್ಚರಿಯ ಫಲಿತಾಂಶಕ್ಕೆ ಕಾರಣವಾಗಬಹುದು ಎಂದು ತಿಳಿಸಿದೆ.
ಇದನ್ನೂ ಓದಿ:ರಾಜ್ಯದಲ್ಲಿಂದು 35024 ಪಾಸಿಟಿವ್ ಪ್ರಕರಣ, 270 ಜನರ ಸಾವು
ದೇಶದ ನಾಲ್ಕು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣೆ ನಡೆದಿದೆ. ಪಶ್ಚಿಮಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಕೋವಿಡ್ ಭೀತಿಯ ನಡುವೆ ಚುನಾವಣೆ ನಡೆದಿತ್ತು.
ಎನ್ ಡಿಟಿವಿ ಮತಗಟ್ಟೆ ಸಮೀಕ್ಷೆ ಪ್ರಕಾರ,164ರಿಂದ 176 ಸ್ಥಾನ, ಬಿಜೆಪಿ 105ರಿಂದ 115 ಸ್ಥಾನ ಪಡೆಯಬಹುದು ಎಂದು ಹೇಳಿದೆ. ಎಬಿಪಿ ಮತ್ತು ಸಿ ವೋಟರ್ ಮತಗಟ್ಟೆ ಸಮೀಕ್ಷೆ ಪ್ರಕಾರ ಪಶ್ಚಿಮಬಂಗಾಳದಲ್ಲಿ ಬಿಜೆಪಿ 109ರಿಂದ 121 ಸ್ಥಾನ, ಟಿಎಂಸಿಗೆ 152ರಿಂದ 164 ಸ್ಥಾನ, ಕಾಂಗ್ರೆಸ್ 15ರಿಂದ 25, ಇತರರು ಶೂನ್ಯ ಸ್ಥಾನ ಪಡೆಯಬಹುದು ಎಂದು ತಿಳಿಸಿದೆ.
ಅಸ್ಸಾಂನಲ್ಲಿ ಒಟ್ಟು 126 ಸ್ಥಾನಗಳಿದ್ದು ಆಜ್ ತಕ್ ಮತ್ತು ಎಎಕ್ಸ್ ಐಎಸ್ ಸಮೀಕ್ಷೆ ಪ್ರಕಾರ, ಬಿಜೆಪಿ 75ರಿಂದ 85ಸ್ಥಾನ ಪಡೆಯುವ ಮೂಲಕ ಮತ್ತೆ ಅಧಿಕಾರದ ಗದ್ದುಗೆ ಏರಲಿದೆ. ಕಾಂಗ್ರೆಸ್ ಮೈತ್ರಿಕೂಟ 40ರಿಂದ 50 ಸ್ಥಾನ ಪಡೆಯಬಹುದು ಎಂದು ಹೇಳಿದೆ.
ರಿಪಬ್ಲಿಕ್ ಟಿವಿ ಸಮೀಕ್ಷೆ ಮಾತ್ರ ಪಶ್ಚಿಮ ಬಂಗಾಳದಲ್ಲಿ 138–148 ನ ಗೆದ್ದು, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳಿದೆ. ಟಿಎಂಸಿ 128–138 ಸ್ಥಾನ ಗೆಲ್ಲಿದೆ. ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು 11–21 ಸ್ಥಾನ ಗೆಲ್ಲುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಟೈಮ್ಸ್ ನೌ, ಸಿ- ವೋಟರ್ ಸಮೀಕ್ಷೆಯಲ್ಲಇಯೂ ಕೂಡ ತೃಣಮೂಲ ಕಾಂಗ್ರೆಸ್ ಗೆ ಬಹುಮತ ಬಂದಿದ್ದು 158 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ ಎಂದು ಹೇಳಿದೆ. ಉಳಿದಂತೆ ಬಿಜೆಪಿ 115 ಹಾಗೂ ಎಡ ಪಕ್ಷಗಳು 19 ಸ್ಥಾನಕ್ಕೆ ತೃಪ್ಇ ಪಟ್ಟ್ಉಕೊಳ್ಳಲಿದೆ ಎಂದು ತಿಳಿಸಿದೆ.
ಪಶ್ಚಿಮಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮೂರನೇ ಬಾರಿಗೆ ಸಿಎಂ ಗದ್ದುಗೆ ಏರುತ್ತಾರಾ? ಕೇರಳದಲ್ಲಿ ಎಲ್ ಡಿಎಫ್ ಮತ್ತೆ ಅಧಿಕಾರ ಹಿಡಿಯಲಿದೆಯಾ, ತಮಿಳುನಾಡು, ಅಸ್ಸಾಂ, ಪುದುಚೇರಿಯಲ್ಲಿ ಏನಾಗಲಿದೆ ಎಂಬ ಕುತೂಹಲಕ್ಕೆ ಮೇ 2ರ ಫಲಿತಾಂಶ ಸ್ಪಷ್ಟ ಉತ್ತರ ನೀಡಲಿದೆ.