ನವದೆಹಲಿ:ಉತ್ತರಪ್ರದೇಶದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ (ಫೆ.08) ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತೀಯ ಜನತಾ ಪಕ್ಷದ ಪ್ರಣಾಳಿಕೆ “ಲೋಕ ಕಲ್ಯಾಣ್ ಸಂಕಲ್ಪ ಪತ್ರ” ಬಿಡುಗಡೆಗೊಳಿಸಿದ್ದಾರೆ.
ಇದನ್ನೂ ಓದಿ:ಶಿವಮೊಗ್ಗದಲ್ಲಿ ತೀವ್ರ ಸ್ವರೂಪ ಪಡೆದ ಹಿಜಾಬ್- ಕೇಸರಿ ಗಲಾಟೆ: ಕಲ್ಲು ತೂರಾಟ, ಲಾಠಿ ಚಾರ್ಜ್
ರೈತರ ಕೃಷಿಗೆ ಉಚಿತ ವಿದ್ಯುತ್ ಹಾಗೂ ಪ್ರತಿ ಮನೆಯ ಒಬ್ಬ ಸದಸ್ಯನಿಗೆ ಉದ್ಯೋಗ ನೀಡುವುದಾಗಿ ಅಮಿತ್ ಶಾ ಬಿಡುಗಡೆ ಮಾಡಿರುವ ಬಿಜೆಪಿ ಪ್ರಣಾಳಿಕೆಯಲ್ಲಿ ಮತದಾರರಿಗೆ ಭರವಸೆ ನೀಡಲಾಗಿದೆ ಎಂದು ವರದಿ ತಿಳಿಸಿದೆ.
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉತ್ತರಪ್ರದೇಶದ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಸಮ್ಮುಖದಲ್ಲಿ ಅಮಿತ್ ಶಾ ಅವರು ಬಿಜೆಪಿ ಪ್ರಣಾಳಿಕೆ ಲೋಕ ಕಲ್ಯಾಣ ಸಂಕಲ್ಪ ಪತ್ರವನ್ನು ಬಿಡುಗಡೆಗೊಳಿಸಿದರು.
ಫೆಬ್ರುವರಿ 10ರಿಂದ ಉತ್ತರಪ್ರದೇಶದಲ್ಲಿ ಏಳು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಫೆ.10, 14, 20, 23, 27 ಮತ್ತು ಮಾರ್ಚ್ 3, 7ರಂದು ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
2017ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 312 ಸ್ಥಾನಗಳಲ್ಲಿ ಪ್ರಚಂಡ ಜಯ ಗಳಿಸಿತ್ತು. 403 ವಿಧಾನಸಭಾ ಸ್ಥಾನ ಹೊಂದಿರುವ ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ 47 ಸ್ಥಾನ, ಮಾಯಾವತಿಯ ಬಹುಜನ್ ಸಮಾಜ್ ಪಕ್ಷ 19 ಸ್ಥಾನ ಹಾಗೂ ಕಾಂಗ್ರೆಸ್ ಕೇವಲ 7 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.
ಪ್ರಣಾಳಿಕೆಯಲ್ಲೇನಿದೆ?
*ರೈತರಿಗೆ ಉಚಿತ ವಿದ್ಯುತ್ ಸರಬರಾಜು
*ಕಾಲೇಜಿಗೆ ತೆರಳುವ ವಿದ್ಯಾರ್ಥಿನಿಯರಿಗೆ ಸ್ಕೂಟಿ
*ಲವ್ ಜಿಹಾದ್ ಪ್ರಕರಣದಲ್ಲಿ ಆರೋಪಿಯಾದರೆ ಹತ್ತು ವರ್ಷ ಜೈಲುಶಿಕ್ಷೆ ಮತ್ತು ಒಂದು ಲಕ್ಷ ರೂಪಾಯಿ ದಂಡ