Advertisement

ವಿಧಾನಸಭೆ ಚುನಾವಣೆ ಹಿನ್ನೆಲೆ: ನಾಳೆಯಿಂದ ನಡ್ಡಾ ರಾಜ್ಯ ಪ್ರವಾಸ

09:46 PM Feb 18, 2023 | Team Udayavani |

ಬೆಂಗಳೂರು : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

Advertisement

ನಡ್ಡಾ ಅವರು ಸೋಮವಾರದಿಂದ 2 ದಿನಗಳ ಕಾಲ ಉಡುಪಿ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಯಲ್ಲಿ ಅವರು ಪ್ರವಾಸ ನಡೆಸಲಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೃಂಗೇರಿ ಮಠಕ್ಕೆ ಭೇಟಿ ನೀಡಿ, ರಾತ್ರಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಇದೇ ವೇಳೆ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಫೆ.23ರಂದು ಸಂಡೂರಿಗೆ ಆಗಮಿಸಿ, ಕಲಬುರಗಿ ವಿಭಾಗದ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ ಜಿಲ್ಲೆಗಳ ಕೋರ್‌ ಕಮಿಟಿ ಸಭೆ ನಡೆಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next