Advertisement

ಶೀರೂರು ಶ್ರೀಗಳಿಗೆ ಟಿಕೆಟ್‌:ವರಿಷ್ಠರ ನಿರ್ಧಾರವೇ ಅಂತಿಮ

06:30 AM Mar 12, 2018 | Team Udayavani |

ಶಿವಮೊಗ್ಗ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಶೀರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಪಾದರಿಗೆ ಟಿಕೆಟ್‌ ನೀಡುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆಂದು ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 224 ವಿಧಾನಸಭಾ  ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ ಕೇಂದ್ರ ನಾಯಕರು ಸರ್ವೇ ನಡೆಸಿದ್ದಾರೆ. ಈ ವರದಿಯಲ್ಲಿನ ಅಂಶಗಳನ್ನು ಗಮನಿಸಿ ಅಭ್ಯರ್ಥಿ ಯಾರಾಗಬೇಕೆಂಬುದನ್ನು ವರಿಷ್ಠರು ನಿರ್ಧರಿಸಲಿದ್ದಾರೆ ಎಂದರು.

ಬಿಜೆಪಿ ಗಂಗಾ ನದಿ ಇದ್ದಂತೆ. ಯಾರೇ ಪಕ್ಷಕ್ಕೆ ಬಂದರೂ ಅವರು ಪವಿತ್ರರಾಗುತ್ತಾರೆ. ಶೀರೂರು ಶ್ರೀಗಳ ಹೇಳಿಕೆ ಬಗ್ಗೆ ತಮಗೆ ಮಾಹಿತಿಯಿಲ್ಲ. ಅವರು ಬಿಜೆಪಿಯಿಂದ ಟಿಕೆಟ್‌ ಕೇಳಿದ್ದರೆ ಪಕ್ಷದ ಮೇಲಿನ ಅವರ ಅಭಿಮಾನಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಚುನಾವಣೆಗೆ ಸ್ಪರ್ಧಿಸುವ ಅವಕಾಶವಿದೆ. ಉಡುಪಿ ಅಷ್ಟಮಠಗಳಲ್ಲಿ ಒಂದಾದ ಶೀರೂರು ಮಠದ ಶ್ರೀಗಳು ಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದರೆ ತಪ್ಪೇನಿಲ್ಲ. ಅದು ಅವರ ವೈಯಕ್ತಿಕ ಅಪೇಕ್ಷೆ  ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next